‘ಸಿಂಧ್’ ಕುರಿತು ಮುಖ್ಯಮಂತ್ರಿ ಯೋಗಿ ಹೇಳಿಕೆಗೆ ತಬ್ಬಿಬ್ಬಾದ ಪಾಕಿಸ್ತಾನ

ಇಸ್ಲಾಮಾಬಾದ್ – ಸಿಂಧ್ ಪ್ರಾಂತ್ಯವನ್ನು ಹಿಂಪಡೆಯುವ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ಪಾಕಿಸ್ತಾನ ಟೀಕಿಸಿದೆ. ‘ಇದು ಯೋಗಿಯವರ ಅತ್ಯಂತ ಬೇಜವಾಬ್ದಾರಿತನದ ಹೇಳಿಕೆಯಾಗಿದೆ’, ಎಂದು ಪಾಕ್ ಆಕ್ರೋಶ ವ್ಯಕ್ತಪಡಿಸಿದೆ. ‘ಸಿಂಧಿ ಕೌನ್ಸಿಲ್ ಆಫ್ ಇಂಡಿಯಾ’ ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಿಂಧಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿಯವರು, 500 ವರ್ಷಗಳ ನಂತರ ಅಯೋಧ್ಯೆಯಲ್ಲಿರುವ ಶ್ರೀರಾಮನ ಜನ್ಮಸ್ಥಳವನ್ನು ನಾವು ಹಿಂಪಡೆಯಲು ಸಾಧ್ಯವಾದರೆ, ಸಿಂಧ್ ಪ್ರದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೇಳಲು ಯಾವುದೇ ಕಾರಣವಿಲ್ಲ ಎಂದು ಹೇಳಿದ್ದರು.

ಈ ವಿಷಯದ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್, ಭಾರತೀಯ ನಾಯಕನ ಪ್ರಚೋದನಕಾರಿ ಹೇಳಿಕೆಗಳು ‘ಅಖಂಡ ಭಾರತ’ದ (ಅವಿಭಜಿತ ಭಾರತ) ಎಂಬ ಅರ್ಥಹೀನ ಹೇಳಿಕೆಯಿಂದ ಪ್ರೇರಿತವಾಗಿದೆ. ಅವರು, ‘ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಬೇಜವಾಬ್ದಾರಿ ಹೇಳಿಕೆಯನ್ನು ನಾವು ಖಂಡಿಸುತ್ತೇವೆ” ಎಂದು ಹೇಳಿದರು.