ನವದೆಹಲಿ – ಭಾರತವು ಚೀನಾ ಮತ್ತು ಪಾಕಿಸ್ತಾನ ಗಡಿಯಲ್ಲಿ ಎಸ್-400 ಕ್ಷಿಪಣಿ ವಿರೋಧಿ ವ್ಯವಸ್ಥೆಯನ್ನು ನಿಯೋಜಿಸಿದೆ. ಚೀನಾ ಗಡಿಯಲ್ಲಿ 2 ವ್ಯವಸ್ಥೆಗಳನ್ನು ನಿಯೋಜಿಸಲಾಗಿದ್ದು, ಪಾಕಿಸ್ತಾನದ ಗಡಿಯಲ್ಲಿ 1 ವ್ಯವಸ್ಥೆಯನ್ನು ನಿಯೋಜಿಸಲಾಗಿದೆ. ಭಾರತ ಈ ವ್ಯವಸ್ಥೆಯನ್ನು ರಷ್ಯಾದಿಂದ ಖರೀದಿಸಿದೆ.
ಭಾರತವು ರಷ್ಯದಿಂದ ಒಟ್ಟು 5 ಎಸ್-400 ಕ್ಷಿಪಣಿ ವಿರೋಧಿ ವ್ಯವಸ್ಥೆಗಳನ್ನು ಖರೀದಿಸುವ ಒಪ್ಪಂದಕ್ಕೆ ಸಹಿ ಹಾಕಿದೆ. ಈ ವ್ಯವಸ್ಥೆಗೆ 35 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ರಷ್ಯಾದಿಂದ ಇನ್ನೂ 2 ವ್ಯವಸ್ಥೆಗಳು ಸಿಗುವುದು ಬಾಕಿ ಇದೆ.