
ಅಯೋಧ್ಯೆ – ಇಲ್ಲಿ ನಡೆಯುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರವು ದೇಶದ 5 ಲಕ್ಷ ದೇವಾಲಯಗಳಲ್ಲಿ ಏಕಕಾಲದಲ್ಲಿ ಪ್ರಸಾರವಾಗಲಿದೆ. ಇದರಲ್ಲಿ ಪ್ರತಿಯೊಂದು ದೇವಸ್ಥಾನವೂ ಒಳಗೊಂಡಿರುತ್ತದೆ. ಹಿಂದೂ ಸಮುದಾಯಗಳನ್ನು ಒಟ್ಟಿಗೆ ಸೇರಿಸುವುದು ಮತ್ತು ಶ್ರೀರಾಮ ಮಂದಿರದ ಉದ್ಘಾಟನೆಯ ಮೂಲಕ ಜಾತಿ ಸಿದ್ಧಾಂತವನ್ನು ಕೊನೆಗೊಳಿಸಲು ಪ್ರಯತ್ನಿಸುವುದು ವಿಶ್ವ ಹಿಂದೂ ಪರಿಷತ್ತಿನ ಉದ್ದೇಶವಾಗಿದೆ. ಇದಕ್ಕೂ ಮುನ್ನ ವಿಶ್ವ ಹಿಂದೂ ಪರಿಷತ್ತು ಶ್ರೀ ರಾಮ ಪಾದುಕಾ ಪೂಜೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ದೇಶದ ಪ್ರತಿಯೊಂದು ಸಮಾಜ ಮತ್ತು ವಿವಿಧ ಜಾತಿಗಳ ಜನರು ಜೋಡಣೆಯಾಗಿದ್ದರು. ಅಲ್ಲದೆ ಕೆಲ ಸಮಯದ ಹಿಂದೆ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಸಮರ್ಪಣಾ ನಿಧಿ ಅಭಿಯಾನ ಆರಂಭಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ದೇಶದ ಕೋಟ್ಯಾಂತರ ಹಿಂದೂ ಕುಟುಂಬಗಳು ಒಂದುಗೂಡಿದ್ದವು. ಭಗವಾನ್ ಶ್ರೀ ರಾಮನ ವಿಷಯ ಬಂದಾಗಲೆಲ್ಲ ಇಡೀ ದೇಶವೇ ಜಾತಿ ಭೇದ ಮರೆತು ಒಂದಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಡಾ. ಸುರೇಂದ್ರ ಜೈನ್ ಹೇಳಿದರು.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News