PFI Supreme Court : ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಮೇಲಿನ 5 ವರ್ಷಗಳ ನಿಷೇಧದ ವಿರುದ್ಧದ ಅರ್ಜಿಯನ್ನು ತಿರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯ !

ನವ ದೆಹಲಿ – ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಮೇಲಿನ ನಿಷೇಧದ ವಿರುದ್ಧ ಸಲ್ಲಿಸಲಾದ ಮನವಿಯನ್ನು ನವೆಂಬರ್ 6 ರಂದು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ.

ಸೆಪ್ಟೆಂಬರ್ 2022 ರಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಅನ್ನು 5 ವರ್ಷಗಳ ಕಾಲ ನಿಷೇಧಿಸಲಾಗಿತ್ತು. ‘’ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’’ ಸೇರಿದಂತೆ ಇತರ 8 ಸಂಘಟನೆಗಳು ದೇಶಕ್ಕೆ ಅಪಾಯ ಎಂದು ಕೇಂದ್ರ ಸರಕಾರ ನಿಷೇಧ ಹೇರಿತ್ತು. ಈ ನಿರ್ಣಯದ ವಿರುದ್ಧ, ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ನವೆಂಬರ್ 2022 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತು; ಆದರೆ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ತರುವಾಯ, ಸಂಘಟನೆಯು ಅಕ್ಟೋಬರ್ 2023 ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದಾಗ, ಸರ್ವೋಚ್ಚ ನ್ಯಾಯಾಲಯ ಕೂಡ ಅದನ್ನು ತಿರಸ್ಕರಿಸಿ, ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತೆ ಹೇಳಿದೆ.