
ಬಲಿಪಾಡ್ಯದಂದು (ನವಂಬರ ೧೪) ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡುತ್ತಾರೆ. ಈ ದಿನ ಪಕ್ವಾನ್ನದ ಭೋಜನವನ್ನು ಮಾಡುತ್ತಾರೆ. ಈ ದಿನ ಜನರು ಹೊಸ ಬಟ್ಟೆಬರೆಗಳನ್ನು ಧರಿಸಿಕೊಂಡು ಇಡೀ ದಿನವನ್ನು ಆನಂದ ದಲ್ಲಿ ಕಳೆಯುತ್ತಾರೆ. ಈ ದಿನ ಗೋವರ್ಧನ ಪೂಜೆಯನ್ನು ಮಾಡುವ ಪದ್ಧತಿಯಿದೆ. ಇದಕ್ಕಾಗಿ ಸೆಗಣಿಯ ಪರ್ವತವನ್ನು ಮಾಡಿ ಅದರ ಮೇಲೆ ಗರಿಕೆ ಮತ್ತು ಹೂವುಗಳನ್ನು ಚುಚ್ಚು ತ್ತಾರೆ. ಕೃಷ್ಣ, ಇಂದ್ರ, ಹಸು ಮತ್ತು ಕರುಗಳ ಚಿತ್ರ ಅಥವಾ ಮೂರ್ತಿಗಳನ್ನು ಜೊತೆಗಿಟ್ಟು, ಅವುಗಳನ್ನು ಪೂಜಿಸಿ ಮೆರವಣಿಗೆ ಮಾಡುತ್ತಾರೆ.
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !
ಅಕ್ಷಯ ತದಿಗೆಯಂದು ಬಿಡಿಸುವ ರಂಗೋಲಿಗಳು
ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ ೨೩)