2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮರಳಿ ತಂದರೆ ಇಡೀ ದೇಶವೇ ಮತ ಹಾಕುವುದು ! – ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿಯಿಂದ ಬಿಜೆಪಿಗೆ ಹುರುಳಿಲ್ಲದ ಸವಾಲು !

ನವ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2019 ರಲ್ಲಿ ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಮರಳಿ ತರಲಾಗುವುದು’ ಎಂದು ಹೇಳಿದ್ದರು. ಪ್ರಧಾನಿ ಮೋದಿ ಸರಕಾರ ಬಂದು 10 ವರ್ಷ ಕಳೆದಿದೆ. ಅದಕ್ಕೂ ಮುನ್ನ ಅಟಕಲ್ ಬಿಹಾರಿ ವಾಜಪೇಯಿ ಅವರು 6 ವರ್ಷಗಳ ಕಾಲ ಪ್ರಧಾನಿಯಾಗಿದ್ದರು. ಅಂತಹ ಬಿಜೆಪಿಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮರಳಿ ತರುವುದನ್ನು ಯಾರು ತಡೆದಿದ್ದಾರೆ ? 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೂ ಮುನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಮರಳಿ ತಂದರೆ ಇಡೀ ದೇಶದ ಮತಗಳು ಸಿಗುತ್ತವೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಸವಾಲು ಹಾಕಿದ್ದಾರೆ. ಡಿಸೆಂಬರ್ 6 ರಂದು ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನೆಹರೂ ಅವರಿಂದಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿದ್ದರು. ಈ ಬಗ್ಗೆ ಅಧೀರ್ ರಂಜನ್ ಚೌಧರಿ ಮೇಲಿನ ಸವಾಲನ್ನು ಹಾಕಿದ್ದಾರೆ.

ಸಂಪಾದಕೀಯ ನಿಲುವು

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸೃಷ್ಟಿಯಾಗಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಅದನ್ನು ಮರಳಿ ತರಬೇಕಿತ್ತು; ಆದರೆ ಕಾಂಗ್ರೆಸ್ ಮುಸ್ಲಿಮರ ಓಲೈಕೆಗಾಗಿ, ಉದ್ದೇಶ ಪೂರ್ವಕವಾಗಿಯೇ ನಿರ್ಲಕ್ಷಿಸಿ ರಾಷ್ಟ್ರ ದ್ರೋಹ ಮಾಡಿದೆ. ಈಗ ಅಂತಹ ಸವಾಲು ಮಾಡುವ ಹಕ್ಕು ಕಾಂಗ್ರೆಸ್ಸಿಗಿಲ್ಲ ! ಇದಕ್ಕೆ ವಿರುದ್ಧವಾಗಿ, ಈ ರಾಷ್ಟ್ರಘಾತಕ ಕಾಂಗ್ರೆಸ್ ಕಠಿಣ ಪ್ರಾಯಶ್ಚಿತ್ತವನ್ನು ತೆಗೆದುಕೊಳ್ಳಬೇಕು !