ಭಾರತೀಯ ರಿಸರ್ವ್ ಬ್ಯಾಂಕ್ ರೂ 5 ಮತ್ತು ರೂ 10 ನಾಣ್ಯಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ !

ನವ ದೆಹಲಿ – ದೇಶದಲ್ಲಿ 10 ರೂಪಾಯಿ ನಾಣ್ಯಗಳ ಹೊರತಾಗಿ 1, 2, 5 ಮತ್ತು 20 ರೂಪಾಯಿ ನಾಣ್ಯಗಳು ಚಲಾವಣೆಯಲ್ಲಿವೆ. ಈ ಎಲ್ಲಾ ನಾಣ್ಯಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಲಾಗಿದ್ದು, ಅವುಗಳೆಲ್ಲವೂ ಮತ್ತು ಮನ್ನಣೆ ಪ್ರಾಪ್ತವಾಗಿವೆ. ಈ ನಾಣ್ಯಗಳನ್ನು ನಕಲಿ ಎಂದು ಕರೆದು ಸ್ವೀಕರಿಸಲು ಯಾರೂ ನಿರಾಕರಿಸುವಂತಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಸ್ಪಷ್ಟಪಡಿಸಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಾರ, 25 ಪೈಸೆ ಅಥವಾ ಅದಕ್ಕಿಂತ ಕಡಿಮೆ ಮೌಲ್ಯದ ನಾಣ್ಯಗಳನ್ನು ಮಾತ್ರ ನಿಷೇಧಿಸಲಾಗಿದೆ. ಹೊಸ 50 ಪೈಸೆ ನಾಣ್ಯಗಳನ್ನು ಬಿಡುಗಡೆ ಮಾಡಲಾಗುವುದಿಲ್ಲ; ಆದರೆ ಅವು ಇನ್ನೂ ಚಲಾವಣೆಯಲ್ಲಿವೆ ಮತ್ತು ಅವುಗಳನ್ನು ಸ್ವೀಕರಿಸಲು ಯಾರೂ ನಿರಾಕರಿಸುವಂತಿಲ್ಲ.

10 ರೂಪಾಯಿ ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದವರ ವಿರುದ್ಧ ಪೊಲೀಸ್ ದೂರು ದಾಖಲಿಸಬಹುದು !

ಯಾವುದೇ ವ್ಯಕ್ತಿ ಅಥವಾ ಅಂಗಡಿಯವರು 10 ರೂಪಾಯಿ ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದರೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಬಹುದು ಮತ್ತು ಅವರಿಗೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.