ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು!- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು – ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು 50 ರಿಂದ 60 ಶಾಸಕರೊಂದಿಗೆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಬಹುದು ಎಂದು ಜನತಾ ದಳ (ಜಾತ್ಯತೀತ) ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಪ್ರಭಾವಿ ನಾಯಕನ ಹೆಸರು ಹೇಳಲು ನಿರಾಕರಿಸಿದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಸರ್ಕಾರ ಯಾವಾಗ ಬೀಳುತ್ತದೋ?, ಗೊತ್ತಿಲ್ಲ. ಪ್ರಭಾವಿ ಸಚಿವರೊಬ್ಬರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಹತಾಶರಾಗಿದ್ದಾರೆ. ಕೇಂದ್ರ ಸರ್ಕಾರ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ, ಅದರಲ್ಲಿ ಅವರು ಬದುಕುಳಿಯುವ ಸಾಧ್ಯತೆಯಿಲ್ಲ. ಕಾನೂನು ತೊಡಕು ತಪ್ಪಿಸಲು ಬಿಜೆಪಿ ಸೇರುವ ಚಿಂತನೆಯಲ್ಲಿದ್ದಾರೆ. ಸದ್ಯ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸುತ್ತಿದ್ದು, ಪಕ್ಷ ಬದಲಾಯಿಸುವ ಪ್ರಕ್ರಿಯೆಯಲ್ಲಿ 50ರಿಂದ 60 ಶಾಸಕರನ್ನು ಕರೆತರುವ ಸಾಧ್ಯತೆ ಇದೆ. ಮಹಾರಾಷ್ಟ್ರದಂತಹ ರಾಜ್ಯದಲ್ಲಿ ಇದು ನಡೆಯಬಹುದಾದರೆ ಕರ್ನಾಟಕದಲ್ಲಿ ಇದು ಅಸಾಧ್ಯವೇನಲ್ಲ.