ಆಕ್ರೋಶಿತ ಗುಂಪಿನಿಂದ ಪೊಲೀಸರ ಮೇಲೆ ಕಲ್ಲು ತೂರಾಟ !

ಗೋಪಾಲಗಂಜ್ (ಬಿಹಾರ) – ಜಿಲ್ಲೆಯ ದಾನಪುರ ಗ್ರಾಮದಲ್ಲಿ ಅರ್ಚಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟ ಅರ್ಚಕ ಮನೋಜ್ ಕುಮಾರ್ ಎಂದು ಗುರುತಿಸಲಾಗಿದ್ದು ಆತನಿಗೆ 32 ವರ್ಷ ವಯಸ್ಸಾಗಿತ್ತು, ಕುತ್ತಿಗೆಗೆ ಗುಂಡು ಹಾರಿಸಿ ಕಣ್ಣುಗಳನ್ನು ಹೊರತೆಗೆದಿರುವ ಆಘಾತಕಾರಿ ಮಾಹಿತಿ ಲಭಿಸಿದೆ. ಅವರ ಗುಪ್ತಾಂಗಕ್ಕೂ ತೀವ್ರ ಹಾನಿಯಾಗಿದೆ ಎಂದು ಹೇಳಲಾಗಿದೆ.
ಡಿಸೆಂಬರ್ 11ರ ರಾತ್ರಿಯಿಂದ ಮನೋಜ ಕುಮಾರ್ ನಾಪತ್ತೆಯಾಗಿದ್ದರು. ಡಿಸೆಂಬರ್ 16 ರಂದು ಸಮೀಪದ ಪೊದೆಯಲ್ಲಿ ಅವರ ಶವ ಪತ್ತೆಯಾದ ನಂತರ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಕ್ರೋಶಗೊಂಡ ಗುಂಪು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 27ಕ್ಕೆ ಅಡ್ಡಿಪಡಿಸಿ ಪೊಲೀಸ್ ವಾಹನವನ್ನು ಧ್ವಂಸಗೊಳಿಸಿದೆ. ಪೊಲೀಸರ ಮೇಲೂ ಗುಂಪು ಕಲ್ಲು ತೂರಾಟ ನಡೆಸಿತು. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರದ ಜತೆಗೆ ಅಶ್ರುವಾಯು ಪ್ರಯೋಗಿಸಿದರು. ಮೃತ ಅರ್ಚಕ ಮನೋಜ ಅವರ ಸಹೋದರ ಅಶೋಕ ಕುಮಾರ್ ಅವರು ಬಿಜೆಪಿಯ ಮಾಜಿ ಸರಪಂಚ್ ಮತ್ತು ಮಂಡಲ ಅಧ್ಯಕ್ಷರಾಗಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಂಪಾದಕೀಯ ನಿಲುವುಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂಗಳ ಸಾಧು-ಸಂತರು, ಪುರೋಹಿತರಿಗೆ ರಕ್ಷಣೆಯಿಲ್ಲದಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! ‘ಮುಸ್ಲಿಮರು ಅಪಾಯದಲ್ಲಿದ್ದಾರೆ’ ಎಂದು ಕೂಗಾಡುವವರು ಇಂತಹ ಘಟನೆಗಳ ಸಂದರ್ಭದಲ್ಲಿ ಚಕಾರವನ್ನೂ ಎತ್ತುವುದಿಲ್ಲ, ಇದನ್ನು ಗಮನದಲ್ಲಿಟ್ಟುಕೊಳ್ಳಿ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !