ಹಿಂದೂ ಸಂಘಟನೆಗಳ ವಿರೋಧದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಯೂಟರ್ನ್ !

ರಾಜ್ಯದಲ್ಲಿ ಹಿಜಾಬ್ ನಿಷೇಧ ಇನ್ನೂ ಹಿಂಪಡೆದಿಲ್ಲ !

ಮೈಸೂರು – ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ನಾವು ಇನ್ನೂ ಹಿಂಪಡೆದಿಲ್ಲ. ಈ ಕುರಿತು ನನಗೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಆಡಳಿತವು ತನಿಖೆ ನಡೆಸುತ್ತಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಸಾಕಷ್ಟು ಚರ್ಚೆ ನಡೆಸಿದ ನಂತರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. 2 ದಿನಗಳ ಹಿಂದೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದರು. ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಮೇಲೆ ಸಿದ್ದರಾಮಯ್ಯನವರು ಮೇಲಿನಂತೆ ಹೇಳಿದ್ದಾರೆ.

ಸಿದ್ಧರಾಮಯ್ಯ ಅವರು, ‘ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು, ಬಟ್ಟೆ, ಆಹಾರ ಆಯ್ಕೆ ವೈಯಕ್ತಿಕವಾಗಿರುತ್ತದೆ’ ಎಂದು ಹೇಳಿದ್ದರಿಂದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಚರ್ಚೆ ಆರಂಭವಾಗಿತ್ತು.