Hindu Woman Pakistan Election : ಪಾಕಿಸ್ತಾನದ ಸಂಸತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆ ಸ್ಪರ್ಧಿಸಲಿದ್ದಾರೆ !

ಡಾ. ಸಾವಿರ ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ

ಪೇಶಾವರ (ಪಾಕಿಸ್ತಾನ) – ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಸಂಸತ್ತಿನ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಲ್ಲಿನ ಬುನೆರ್ ಜಿಲ್ಲೆಯಲ್ಲಿ ಡಾ. ಸವಿರಾ ಪ್ರಕಾಶ ಹೆಸರಿನ ಮಹಿಳೆಯು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯಿಂದ ಅರ್ಜಿಯನ್ನು ಭರ್ತಿ ಮಾಡಿದ್ದಾರೆ. ಆಕೆಯ ತಂದೆ ಡಾ. ಓಂ ಪ್ರಕಾಶ್ ಕಳೆದ 35 ವರ್ಷಗಳಿಂದ ಈ ಪಕ್ಷದ ಕಾರ್ಯಕರ್ತರಾಗಿದ್ದಾರೆ. ಡಾ. ಸವೀರಾ ಮಹಿಳಾ ಶಾಖೆಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಮುಂದಿನ ವರ್ಷ ಫೆಬ್ರವರಿ 8 ರಂದು ಇಲ್ಲಿ ಮತದಾನ ನಡೆಯಲಿದೆ.

ಡಾ. ಸವೀರಾ ಇವರು, ಚುನಾವಣೆಯಲ್ಲಿ ಗೆದ್ದರೆ ಬಡವರು, ಹಿಂದುಳಿದವರ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ. ‘ಸರಕಾರಿ ಆಸ್ಪತ್ರೆಯ ದುಃಸ್ಥಿತಿ ನೋಡಿ ಅದನ್ನು ಸುಧಾರಿಸಲು ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.