1992 ರ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಭಾಗವಹಿಸಿದ 300 ಹಿಂದೂಗಳ ವಿರುದ್ಧ ರಾಜ್ಯದ ಕಾಂಗ್ರೆಸ್ ಸರಕಾರದಿಂದ ಕ್ರಮ !

ಶ್ರೀಕಾಂತ್ ಪೂಜಾರಿ ಎಂಬ ವ್ಯಕ್ತಿಯ ಬಂಧನ

ಹುಬ್ಬಳ್ಳಿ – ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದ್ದಂತೆ, ರಾಜ್ಯದ ಕಾಂಗ್ರೆಸ್ ಸರಕಾರವು ಶ್ರೀರಾಮ ಜನ್ಮಭೂಮಿ ಆಂದೋಲನದ ವಿಷಯದಲ್ಲಿ ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದೆ. 1992ರ ಡಿಸೆಂಬರ್ 5ರಂದು ಇಲ್ಲಿ ನಡೆದ ಪ್ರಕರಣವೊಂದರಲ್ಲಿ ಶ್ರೀಕಾಂತ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ಪೊಲೀಸರಿಂದ ತಂಡ ರಚಿಸಲಾಗಿದೆ. ಈ ಮೂಲಕ ಆಂದೋಲನದಲ್ಲಿ ಭಾಗವಹಿಸಿದವರ ಪಟ್ಟಿಯನ್ನು ಮಾಡಲಾಗಿದೆ. ಇದೀಗ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ 300 ಜನರ ಹೆಸರುಗಳಿವೆ ಎಂದು ಹೇಳಲಾಗುತ್ತಿದೆ. ಇವರೆಲ್ಲರೂ 1992 ಮತ್ತು 1996 ರ ನಡುವಿನ ಗಲಭೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

1992ರ ಡಿಸೆಂಬರ್ 5ರಂದು ಹುಬ್ಬಳ್ಳಿಯಲ್ಲಿ ಧಾರ್ಮಿಕ ಗಲಭೆ ನಡೆದಿತ್ತು. ಇದರಲ್ಲಿ ಓರ್ವ ಮುಸ್ಲಿಂ ಅಂಗಡಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ 30 ವರ್ಷಗಳ ನಂತರ ಶ್ರೀಕಾಂತ ಪೂಜಾರಿಯನ್ನು ಬಂಧಿಸಲಾಗಿದೆ. ಈತ ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದಾರೆ. ಇದರಲ್ಲಿ ಒಟ್ಟು 8 ಮಂದಿ ಆರೋಪಿಗಳಾಗಿದ್ದಾರೆ. ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ.