ಮಕರ ಸಂಕ್ರಾಂತಿ

ತಿಥಿ

ಈ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಸೂರ್ಯನ ಭ್ರಮಣದಿಂದಾಗಿ ಆಗುವ ಕಾಲ ವ್ಯತ್ಯಾಸವನ್ನು ಸರಿಪಡಿಸಲು ಪ್ರತಿ ೮೦ ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ೧ ದಿನ ಮುಂದೂಡಲಾಗುತ್ತದೆ.

ಇತಿಹಾಸ

ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನನ್ನು ವಧಿಸಿದ ಕಥೆಯಿದೆ.

ಮಹತ್ವ

ಈ ದಿನ ಪಂಚಾಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ. ಕರ್ಕಸಂಕ್ರಾಂತಿಯಿಂದ ಮಕರ ಸಂಕ್ರಾಂತಿಯ ವರೆಗಿನ ಕಾಲವನ್ನು ‘ದಕ್ಷಿಣಾಯನ’ ಎನ್ನುತ್ತಾರೆ.

ಸಾಧನೆಯ ದೃಷ್ಟಿಯಿಂದ ಮಹತ್ವ

ಈ ದಿನ ಪಂಚಾಗದ ನಿರಯನ ಪದ್ಧತಿಗನುಸಾರ ಸೂರ್ಯೋದಯದಿಂದ ಸೂರ್ಯಾಸ್ತದ ವರೆಗಿನ ವಾತಾವರಣವು ಅಧಿಕ ಚೈತನ್ಯಮಯವಾಗಿರುವುದರಿಂದ ಸಾಧನೆ ಮಾಡುವವರಿಗೆ ಈ ಚೈತನ್ಯದ ಲಾಭವಾಗುತ್ತದೆ.

ಪರ್ವಕಾಲದಲ್ಲಿ ದಾನದ ಮಹತ್ವ

ಮಕರಸಂಕ್ರಾಂತಿಯಿಂದ ರಥಸಪ್ತಮಿಯ ವರೆಗಿನ ಕಾಲವು ಪರ್ವಕಾಲವಾಗಿರುತ್ತದೆ. ಈ ಪರ್ವಕಾಲದಲ್ಲಿ ಮಾಡಿದ ದಾನ ಮತ್ತು ಪುಣ್ಯಕರ್ಮಗಳು ವಿಶೇಷ ಫಲವನ್ನು ಕೊಡುತ್ತವೆ.

(ಆಧಾರ : ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ’)