ವಾಷಿಂಗ್ಟನ್ (ಅಮೇರಿಕಾ) – ಇರಾಣ ಮತ್ತು ಪಾಕಿಸ್ತಾನ ಈ ದೇಶಗಳ ನಡುವಿನ ಸಂಘರ್ಷದ ಮೇಲೆ ಅಮೇರಿಕಾ ಗಮನವಿಟ್ಟಿದೆ. ದಕ್ಷಿಣ ಮತ್ತು ಮಧ್ಯ ಏಷ್ಯಾದ ನಡುವಿನ ಉದ್ವಿಗ್ನತೆ ಹೆಚ್ಚಾಗಬಾರದು ಎಂದು ನನ್ನ ಇಚ್ಛೆಯಿದೆ. ಇದಕ್ಕಾಗಿ ನಾವು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಇರಾನ್ ಪಾಕಿಸ್ತಾನದ ಮೇಲೆ ನಡೆಸಿರುವ ದಾಳಿಯಿಂದ ಕಂಡು ಬರುವುದೇನೆಂದರೆ, ಅದು ಈ ಪ್ರದೇಶದಲ್ಲಿ ಅಸ್ಥಿರತೆಯನ್ನು ಹೆಚ್ಚಿಸುವ ಕಾರ್ಯ ಮಾಡುತ್ತಿದೆ ಎಂದು ಅಮೇರಿಕೆಯು ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಅವರು ಎರಡೂ ದೇಶಗಳಿಂದ ನಡೆಯುತ್ತಿರುವ ವೈಮಾನಿಕ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಎರಡೂ ಕಡೆಯವರಿಗೆ ಶಾಂತಿ ಸ್ಥಾಪಿಸಲು ಮನವಿ ಮಾಡುತ್ತೇವೆ ಎಂದು ಅವರು ಹೇಳಿದರು.
ಮಧ್ಯಸ್ಥಿಕೆ ವಹಿಸುವ ಸಿದ್ಧತೆಯಲ್ಲಿ ಚೀನಾ !
ಚೀನಾ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧವಿದೆಯೆಂದು ತಿಳಿಸಿದೆ. ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಮಾತನಾಡಿ, ಅವರು ಬಯಸಿದರೆ ನಾವು ಎರಡೂ ದೇಶಗಳ ನಡುವಿನ ಸಮಸ್ಯೆಯನ್ನು ಪರಿಹರಿಸಲು ಎಲ್ಲ ರೀತಿಯಲ್ಲಿ ಪ್ರಯತ್ನಿಸುತ್ತೇವೆ, ನಾವು ಇದಕ್ಕಾಗಿ ಮುಂದಾಳತ್ವವನ್ನು ವಹಿಸಲು ಸಿದ್ಧರಿದ್ದೇವೆ. ಎರಡೂ ದೇಶಗಳ ನಡುವಿನ ಉದ್ವಿಗ್ನತೆ ವಿಶ್ವಸಂಸ್ಥೆಯ ನಿರ್ಣಯ ಮತ್ತು ಅಂತಾರಾಷ್ಟ್ರೀಯ ಕಾನೂನುಗಳ ಆಧಾರದ ಮೇಲೆ ಪರಿಹರಿಸಲಾಗುವುದು ಎಂದು ಹೇಳಿದರು.