ವಿಧಾನಸಭೆಯ ಮುಂಬರುವ ಅಧಿವೇಶನದಲ್ಲಿ ಸಮಾನ ನಾಗರಿಕ ಸಂಹಿತೆಯ ಮಸೂದೆಯನ್ನು ವಿಧಾನಸಭೆ ಮಂಡನೆ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಹೇಳಿಕೆ !

ಡೆಹ್ರಾಡೂನ್ (ಉತ್ತರಾಖಂಡ) – ಸಮಾನ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ಫೆಬ್ರವರಿ 2 ರಂದು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ಕರಡನ್ನು ಮಂಡಿಸುವುದು ಮತ್ತು ನಾವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಮಸೂದೆಯನ್ನು ಒಪ್ಪಿಗೆ ಪಡೆದು ನಾವು ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ, ಎಂದು ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಧಾಮಿಯವರು ತಮ್ಮ ಮಾತನ್ನು ಮುಂದುವರಿಸಿ, ‘ಒಂದು ಭಾರತ, ಶ್ರೇಷ್ಠ ಭಾರತ’ ದ ಗುರಿ ಮತ್ತು ನಿರ್ಣಯಗಳನ್ನು ಚುನಾವಣೆಯ ಮೊದಲು ಜನರ ಮುಂದೆ ಇಡಲಾಗಿತ್ತು. ಅದರ ಸಂಕಲ್ಪ ಮತ್ತು ಆಶಯವನ್ನು ಅನುಸರಿಸಿ, ನಮ್ಮ ಸರ್ಕಾರ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಯಾವಾಗಲೂ ಶ್ರಮಿಸುತ್ತದೆ.

ಸಮಾನ ನಾಗರಿಕ ಸಂಹಿತೆಗಾಗಿ ರಚಿಸಲಾಗಿದ್ದ ತಜ್ಞರ ಸಮಿತಿಯ ಅವಧಿಯನ್ನು ನಾಲ್ಕನೇ ಬಾರಿಗೆ ವಿಸ್ತರಿಸಲಾಗಿದೆ. ಮೇ 26, 2022ರಲ್ಲಿ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಸಮಾನ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಮಿತಿಯನ್ನು ಸ್ಥಾಪಿಸಲಾಯಿತು. ಇದಾದ ನಂತರ ಸಮಿತಿಯ ಅವಧಿಯನ್ನು ಮೂರು ಬಾರಿ ವಿಸ್ತರಿಸಲಾಯಿತು.