ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆ !

ಚಂಪೈ ಸೊರೆನ್ ನೂತನ ಮುಖ್ಯಮಂತ್ರಿ

ರಾಂಚಿ (ಜಾರ್ಖಂಡ್) – ಜಾರ್ಖಂಡ್ ನ ‘ಜಾರ್ಖಂಡ್ ಮುಕ್ತಿ ಮೋರ್ಚಾ’ ಸರಕಾರದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜನವರಿ 31 ರಂದು ರಾತ್ರಿ 8:30 ರ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಕ್ಕೂ ಮುನ್ನ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ವಿಚಾರಣೆ ಪೂರ್ಣಗೊಂಡ ನಂತರ ಮುಖ್ಯಮಂತ್ರಿ ಸೊರೆನ್ ತಮ್ಮ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಅವರ ರಾಜೀನಾಮೆ ನಂತರ ಪಕ್ಷದ ಹಿರಿಯ ನಾಯಕ ಮತ್ತು ಚಂಪೈ ಸೊರೆನ್ ಮುಖ್ಯಮಂತ್ರಿಯಾಗುತ್ತಾರೆ. ಅವರು ಹೇಮಂತ್ ಸೋರೆನ್ ಅವರ ಸಂಬಂಧಿ ಅಲ್ಲ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಹೇಮಂತ್ ಸೊರೇನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.