‘ಸನಾತನ ನಾಶ ಮಾಡಿ‘ ಎಂದು ಹೇಳಿದ ಉದಯನಿಧಿಗೆ ನ್ಯಾಯಾಲಯದಿಂದ ಸಮನ್ಸ್ !

(ಸಮನ್ಸ್ ಅಂದರೆ ಒಬ್ಬ ವ್ಯಕ್ತಿಗೆ ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೀಡಲಾದ ನೋಟೀಸ್)

ಉದಯನಿಧಿ ಸ್ಟಾಲಿನ್

ಬೆಂಗಳೂರು – ‘ನಾವು ಡೆಂಗ್ಯೂ, ಸೊಳ್ಳೆ, ಮಲೇರಿಯಾವನ್ನು ವಿರೋಧಿಸಲು ಸಾಧ್ಯವಿಲ್ಲ ಮತ್ತು ಅವುಗಳನ್ನು ಕೊನೆಗೊಳಿಸಬೇಕು. ಹಾಗೆಯೇ ಸನಾತನವನ್ನೂ ಕೊನೆಗಾಣಿಸಬೇಕಾಗಿದೆ‘, ಎಂದು ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಪರಮೇಶ ಎಂಬುವವರ ದೂರಿನ ಮೇರೆಗೆ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ ೪ ರಂದು ನಡೆಯುವ ವಿಚಾರಣೆಗೆ ಹಾಜರಾಗಲು ಉದಯನಿಧಿ ಅವರಿಗೆ ನ್ಯಾಯಾಲಯ ಹೇಳಿದೆ.

ಈ ಸಂದರ್ಭದಲ್ಲಿ ಪರಮೇಶ ಪರ ವಕೀಲ ಧರಂಪಾಲ ಮಾತನಾಡಿ, ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ವಿರೋಧಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಹೇಳಿಕೆ ಎಲ್ಲೆಡೆ ವ್ಯಾಪಕ ಪ್ರಚಾರ ಪಡೆದಿತ್ತು. ಅವರು ತಮ್ಮ ಹೇಳಿಕೆಗೆ ಬದ್ದರಾಗಿದ್ದಾರೆ. ಅವರು ನ್ಯಾಯಾಲಯವನ್ನು ಎದುರಿಸಬೇಕಾಗಬಹುದು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಉದ್ಘಾಟನೆಯಿಂದಾಗಿ ಹಿಂದೂ ಧರ್ಮದ ಬಗ್ಗೆ ಭಕ್ತಿ, ಶ್ರದ್ಧೆ ಹಾಗೂ ಜಾಗೃತಿ ಹೆಚ್ಚಾಗಿದೆ. ಆದ್ದರಿಂದ ಇಂತಹ ಹೇಳಿಕೆಗಳು ಹಿಂದೂಧರ್ಮ ಆಚರಿಸುವವರಿಗೆ ಮತ್ತು ಇತರ ಕೆಲವು ಧರ್ಮಗಳ ಜನರ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿದ್ದಾರೆ.