ಶ್ರೀ ಗಣೇಶ ಜಯಂತಿ (೧೩ ಫೆಬ್ರವರಿ)
ಶ್ರೀ ಗಣೇಶ ಜಯಂತಿ ಎಂದರೆ ಯಾವ ದಿನ ಗಣೇಶ ಲಹರಿಗಳು ಪ್ರಥಮ ಬಾರಿ ಪೃಥ್ವಿಯ ಮೇಲೆ ಬಂದವೋ, ಅಂದರೆ ಯಾವ ದಿನ ಗಣೇಶನ ಜನ್ಮವಾಯಿತೋ, ಆ ದಿನ. ಅದು ಮಾಘ ಶುಕ್ಲ ಚತುರ್ಥಿಯಾಗಿತ್ತು. ಅಂದಿನಿಂದ ಶ್ರೀ ಗಣೇಶ ಜಯಂತಿಯನ್ನು ಆಚರಿಸಲಾಗುತ್ತದೆ. ಈ ದಿನದ ವೈಶಿಷ್ಟ್ಯವೇನೆಂದರೆ, ಈ ತಿಥಿಯಂದು ಶ್ರೀ ಗಣೇಶನ ತತ್ತ್ವವು ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.
ಶ್ರೀ ಗಣೇಶ ಜಯಂತಿಯ ಮಹತ್ವವೇನು ?
ಗಣಪತಿಯ ಸ್ಪಂದನಗಳು ಮತ್ತು ಪೃಥ್ವಿಯ ಚತುರ್ಥಿ ತಿಥಿಯ ಸ್ಪಂದನಗಳು ಒಂದೇ ರೀತಿಯದ್ದಾಗಿರುತ್ತವೆ, ಆದುದರಿಂದ ಅವುಗಳು ಒಂದಕ್ಕೊಂದು ಅನುಕೂಲವಾಗಿರುತ್ತವೆ; ಅಂದರೆ ಆ ದಿನ ಗಣಪತಿಯ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರಬಹುದು. ಪ್ರತಿ ತಿಂಗಳ ಚತುರ್ಥಿಯ ದಿನ ಗಣಪತಿಯ ತತ್ತ್ವವು ಇತರ ದಿನಗಳ ತುಲನೆಯಲ್ಲಿ ಪೃಥ್ವಿಯ ಮೇಲೆ ೧೦೦೦ ಪಟ್ಟು ಹೆಚ್ಚಿಗೆ ಕಾರ್ಯನಿರತವಾಗಿರುತ್ತದೆ. ಈ ತಿಥಿಯಂದು ಶ್ರೀ ಗಣೇಶನ ಉಪಾಸನೆಯನ್ನು ಮಾಡಿದರೆ ಗಣೇಶತತ್ತ್ವದ ಲಾಭವು ಹೆಚ್ಚಿಗೆ ಆಗುತ್ತದೆ.
ಸಾಧ್ಯವಾದರೆ ಹತ್ತಿರದ ಗಣಪತಿಯ ದೇವಸ್ಥಾನಕ್ಕೆ ಹೋಗಿ ನಾಮ ಜಪಿಸಿ. ದೇವಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲದಿದ್ದರೆ, ಮನೆಯಲ್ಲಿಯೇ ಆದಷ್ಟು ಹೆಚ್ಚು ಗಣಪತಿಯ ನಾಮ ಜಪಿಸಿ ಮತ್ತು ಪ್ರಾರ್ಥನೆ ಮಾಡಿ.