ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ !
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಫೆಬ್ರವರಿ 8 ರಂದು ಮತದಾನದ ನಂತರ ಫೆಬ್ರವರಿ 9 ರಂದು ಬೆಳಿಗ್ಗೆ ಮತ ಎಣಿಕೆ ಪ್ರಾರಂಭವಾಗಿದೆ; ಆದರೆ ಮತ ಏಣಿಕೆಯಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಮತ ಎಣಿಕೆ ನಂತರ ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗಳಿಸಿರುವುದು ಕಂಡು ಬಂದಿದೆ. ಸಂಜೆ 5 ಗಂಟೆ ಸುಮಾರಿಗೆ ಪಾಕಿಸ್ತಾನದ ಚುನಾವಣಾ ಆಯೋಗ ನೀಡಿದ ಮಾಹಿತಿ ಪ್ರಕಾರ ಇಮ್ರಾನ್ ಖಾನ್ ಬೆಂಬಲಿತ ಅಭ್ಯರ್ಥಿ 28 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ನವಾಜ್ ಷರೀಫ್ ಪಕ್ಷ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಲಾವಲ್ ಭುಟ್ಟೋ ಪಕ್ಷ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪಾಕಿಸ್ತಾನದ ಮಾಧ್ಯಮಗಳ ಪ್ರಕಾರ, ಇಮ್ರಾನ್ ಖಾನ್ ಅವರ 80 ಕ್ಕೂ ಹೆಚ್ಚು ಅಭ್ಯರ್ಥಿಗಳು ಮುಂದಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ ಇಮ್ರಾನ್ ಖಾನ್ ಸರಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಇಮ್ರಾನ್ ಖಾನ್ ಅಧಿಕಾರವನ್ನು ಮರಳಿ ಸಿಗಬಾರದು; ಹಾಗಾಗಿ ಪಾಕಿಸ್ತಾನ ಸೇನೆ ಆಕಾಶ ಪಾತಾಳ ಒಂದು ಮಾಡುತ್ತಿದೆ. ಅಭ್ಯರ್ಥಿಗಳ ಗೆಲುವನ್ನು ಘೋಷಿಸುವುದನ್ನು ಸೇನೆ ತಪ್ಪಿಸುತ್ತಿದೆ ಎಂದು ಪಾಕಿಸ್ತಾನದ ಮಾಧ್ಯಮಗಳೇ ಹೇಳುತ್ತಿವೆ.
(ಸೌಜನ್ಯ – India Today)