ಇಂದು ಇಸ್ಲಾಮಿಕ್ ರಾಷ್ಟ್ರವಾದ ಸಂಯುಕ್ತ ಅರಬ್ ಎಮಿರೇಟ್ಸ್‌ನಲ್ಲಿ ಮೊದಲ ಹಿಂದೂ ದೇವಾಲಯದ ಉದ್ಘಾಟನೆ !

ಪ್ರಧಾನಿ ಮೋದಿಯವರಿಂದ ಉದ್ಘಾಟನೆ !

ನವದೆಹಲಿ – ಫೆಬ್ರವರಿ ೧೪ ರಂದು ಸಂಯುಕ್ತ ಅರಬ್ ಎಮಿರೇಟ್ಸ್‌ನಲ್ಲಿ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಅವರ ಹಸ್ತದಿಂದ ಉದ್ಘಾಟನೆಯಾಗಲಿದೆ. ಅಬುಧಾಬಿಯಲ್ಲಿ ಈ ದೇವಾಲಯವನ್ನು ನಿರ್ಮಿಸಲಾಗಿದೆ. ಇದು ಸ್ವಾಮಿ ನಾರಾಯಣ ದೇವಸ್ಥಾನವಾಗಿದ್ದು ಉದ್ಘಾಟನೆಯ ನಂತರ ಮಾರ್ಚ್ ೧ ರಿಂದ ಈ ದೇವಾಲಯ ಭಕ್ತರ ದರ್ಶನಕ್ಕಾಗಿ ತೆರೆಯಲಾಗುವುದು. ಈ ಕಾರ್ಯಕ್ರಮಕ್ಕಾಗಿ ಪ್ರಧಾನಿಮೋದಿ ಅವರು ಅಬುಧಾಬಿಗೆ ತೆರಳಿದ್ದಾರೆ. ಇದಕ್ಕೂ ಮೊದಲು ಸಾಮಾಜಿಕ ಜಾಲತಾಣದಲ್ಲಿ ಅವರ ಒಂದು ಪೋಸ್ಟ್ ಪ್ರಸಾರವಾಗಿದೆ.

ಪ್ರಧಾನಿ ಮೋದಿ ಅವರು ಈ ಪೊಸ್ಟ್‌ನಲ್ಲಿ, ನಾನು ಸಂಯುಕ್ತ ಅರಬ್ ಎಮಿರೇಟ್ಸ್ ಮತ್ತು ಕತಾರ್‌ಗೆ ಭೇಟಿ ನೀಡುತ್ತೇನೆ ಹಾಗೂ ಅಲ್ಲಿಯ ಅನೇಕ ಕಾರ್ಯಕ್ರಮಗಳಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ದ್ವಿಪಕ್ಷೀಯ ಸಂಬಂಧ ವೃದ್ದಿಯಾಗಲಿದೆ. ನಾನು ಪ್ರಧಾನಿ ಆದ ನಂತರ ಸಂಯುಕ್ತ ಅರಬ್ ಎಮಿರೇಟ್ಸ್‌ಗೆ ಇದು ನನ್ನ ಏಳನೇ ಭೇಟಿಯಾಗಿದೆ. ಈ ಪ್ರವಾಸದಲ್ಲಿ ನಾನು ಸಂಯುಕ್ತ ಅರಬ್ ಎಮಿರೇಟ್ಸ್‌ನಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸುತ್ತೇನೆ. ಅಬುಧಾಬಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಹಿಂದೂ ಸಮುದಾಯದೊಂದಿಗೆ ಸಂವಾದ ನಡೆಸುವೆ. ಆನಂತರ ಕತಾರ್‌ನಲ್ಲಿ ನಾನು ಶೇಖ್ ತಮಿಮ್ ಬಿನ್ ಹಮಾದ್ ಅವರನ್ನು ಭೇಟಿಯಾಗುತ್ತೇನೆ. ಅವರ ನಾಯಕತ್ವದಲ್ಲಿ ಕತಾರ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದನ್ನು ಜಗತ್ತು ನೋಡಿದೆ ಎಂದಿದ್ದಾರೆ.