ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ : ವಾಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ, ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಘೋಷಣೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ 2024-25ರ ವಾರ್ಷಿಕ ಬಜೆಟ್ ಮಂಡನೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಲವಾರು ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಇದರಲ್ಲಿ ವಿವಾದಾತ್ಮಕ ವಾಕ್ಫ್ ಬೋರ್ಡ್ನಲ್ಲಿರುವ ಆಸ್ತಿ ಸಂರಕ್ಷಣೆಗಾಗಿ 100 ಕೋಟಿ ರೂಪಾಯಿಗಳನ್ನು ಹಾಗೂ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿದೆ, ಅದೇ ರೀತಿ ಜೈನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಹಾಗೂ ಬೀದರ್ ಶ್ರೀ ನಾನಕ್ ಗುರುದ್ವಾರದ ರಕ್ಷಣೆಗಾಗಿ 1ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಒಂದು ವಾರದ ಹಿಂದಷ್ಟೇ ಸಿಎಂ ಸಿದ್ದರಾಮಯ್ಯನವರು 31 ಕೋಟಿ ರೂಪಾಯಿಗಳನ್ನು ವಾಕ್ಫ್ ಆಸ್ತಿ ಸಂರಕ್ಷಣೆಗಾಗಿ ಬಿಡುಗಡೆಗೊಳಿಸಿದ್ದರು.

ಮತ್ತು ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್‌ಎಸ್ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.