ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡಲು ಅಫ್ಘಾನಿಸ್ತಾನವನ್ನು ಬಳಸಬಾರದು ! – ಭಾರತ

ಬಿಶ್ಕೆಕ್ (ಕಿರ್ಗಿಸ್ತಾನ್) – ಅಫ್ಗಾನಿಸ್ತಾನದೊಂದಿಗೆ ಭಾರತದ ಹಿತ ಸಂಬಂಧಿಸಿದೆ. ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ಮತ್ತು ತರಬೇತಿ ನೀಡಲು ಅಫ್ಘಾನಿಸ್ತಾನವನ್ನು ಬಳಸಬಾರದು ಎಂದು ಭಾರತದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ವಿಕ್ರಮ್ ಮಿಸರಿ ಇಲ್ಲಿ ಆಯೋಜಿಸಿದ್ದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ವಿವಿಧ ದೇಶಗಳ ಭದ್ರತಾ ಮಂಡಳಿಯ ಕಾರ್ಯದರ್ಶಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರ ಇಲ್ಲಿ ಆಯೋಜಿಸಲಾಗಿದ್ದ 6ನೇ ಪ್ರಾದೇಶಿಕ ಸಭೆಗಳನ್ನು ಮಿಸರಿ ಉದ್ದೇಶಿಸಿ ಮಾತನಾಡುತ್ತಿದ್ದರು. ಭಾರತವಲ್ಲದೇ ರಷ್ಯಾ, ಚೀನಾ, ಇರಾನ್, ಕಿರ್ಗಿಸ್ತಾನ್, ಕಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಈ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಮಿಸರಿ ತಮ್ಮ ಮಾತನ್ನು ಮುಂದುವರಿಸಿ,

1. ಅಫ್ಘಾನಿಸ್ತಾನದ ಅಸ್ಥಿರತೆ ಇಡೀ ಪ್ರದೇಶಕ್ಕೆ ಅಪಾಯವಾಗಿದೆ. ಅಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ. ನೆರೆಹೊರೆಯವರಾಗಿರುವುದರಿಂದ ಭಾರತ ಮತ್ತು ಅಫ್ಘಾನಿಸ್ತಾನಗಳ ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳಿಂದ ಪರಸ್ಪರ ಸಂಬಂಧ ಹೊಂದಿದ್ದಾರೆ.

2. ಅಫ್ಘಾನಿಸ್ತಾನದಲ್ಲಿ ಎಲ್ಲರನ್ನು ಒಳಗೊಂಡ ಸರಕಾರ ಸ್ಥಾಪನೆಗೆ ಮತ್ತು ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ.

3. ಭಾರತವು ಇಲ್ಲಿಯವರೆಗೆ ಅಫ್ಘಾನಿಸ್ತಾನದಲ್ಲಿ 2.49 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಮಾಡಿದೆ. ಇಲ್ಲಿಯ 34 ಪ್ರಾಂತಗಳಲ್ಲಿ ನಡೆದಿರುವ 500 ಯೋಜನೆಗಳಲ್ಲಿ ಭಾರತದ ಸಹಭಾಗಿತ್ವವಿದೆ. ಈ ಯೋಜನೆಗಳು ನೀರು, ವಿದ್ಯುತ್, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿವೆ.