ಜಾರ್ಖಂಡ್‌ನ ವಿಶ್ವವಿದ್ಯಾಲಯಗಳಲ್ಲಿ ಶೇ. 40 ರಷ್ಟು ಖಾಲಿ ಹುದ್ದೆಗಳು ! – ಎಬಿವಿಪಿ

  • ಜಾರ್ಖಂಡ್‌ನ ರಾಜಭವನದ ಮುಂದೆ ಎಬಿವಿಪಿಯ ರಾಷ್ಟ್ರೀಯ ಪ್ರಧಾನ ಮಂತ್ರಿ ಯಾಜ್ಞವಲ್ಕ್ಯ ಶುಕ್ಲಾ ಅವರ ಧರಣಿ !

  • 5 ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳೇ ಇಲ್ಲ !

  • ಪೇಪರ್ ಸೋರಿಕೆ ನೇಮಕಾತಿ ಪರೀಕ್ಷೆ ಮುಂದೂಡಿಕೆ !

ರಾಂಚಿ (ಜಾರ್ಖಂಡ್) – ರಾಜ್ಯದ 5 ವಿಶ್ವವಿದ್ಯಾಲಯಗಳಲ್ಲಿ ಕಳೆದ 9 ತಿಂಗಳಿಂದ ಕುಲಪತಿ ಮತ್ತು ಉಪಕುಲಪತಿ ಹುದ್ದೆಗಳು ಖಾಲಿ ಇವೆ. ಅಲ್ಲದೆ ಶೇ.40ಕ್ಕೂ ಹೆಚ್ಚು ಶಿಕ್ಷಕರ ಮತ್ತು ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಜ್ಞವಲ್ಕ್ಯ ಶುಕ್ಲ ಅವರು ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳನ್ನುದ್ದೇಶಿಸಿ ಇಲ್ಲಿ ರಾಜಭವನದಲ್ಲಿ ನಡೆದ ಧರಣಿ ಆಂದೋಲನದಲ್ಲಿ ಮಾತನಾಡುತ್ತಿದ್ದರು.

ಅವರು ಮಾತು ಮುಂದುವರೆಸಿ,

1. ಪರೀಕ್ಷಾ ಪತ್ರಿಕೆ ಸೋರಿಕೆಯಿಂದಾಗಿ 2 ಸಾವಿರದ 17 ಸರಕಾರಿ ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.

2. ಜೂನಿಯರ್ ಎಂಜಿನಿಯರ್‌ಗಳ 1 ಸಾವಿರದ 560 ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದು ನಾಲ್ಕು ತಿಂಗಳು ಕಳೆದರೂ ಫಲಿತಾಂಶ ಪ್ರಕಟವಾಗಿಲ್ಲ.

3. ಪ್ರಯೋಗಾಲಯಗಳಲ್ಲಿ ಪ್ರಾಥಮಿಕ ಹಂತದ ಸೌಲಭ್ಯಗಳ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳನ್ನು ಮುಚ್ಚಲಾಗಿದೆ.

4. ಪಠ್ಯಕ್ರಮದ ಪುಸ್ತಕಗಳು ಗ್ರಂಥಾಲಯಗಳಲ್ಲಿ ಲಭ್ಯವಿಲ್ಲ.

5. ನಾಲ್ಕು ವರ್ಷಗಳಿಂದ ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆದಿಲ್ಲ.

6. ರಾಜ್ಯದಲ್ಲಿ ಶೈಕ್ಷಣಿಕ ಅರಾಜಕತೆ ಸ್ಥಿತಿ ನಿರ್ಮಾಣವಾಗಿದೆ. ಎಂದು ಹೇಳಿದರು.

ಸಂಪಾದಕೀಯ ನಿಲುವು

ಶಿಕ್ಷಣ ಕ್ಷೇತ್ರದಲ್ಲಿ ಅರಾಜಕ ಸ್ಥಿತಿ !