ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ !

ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ. ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ.
ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ ಜಾಗ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ಮಿತಿ ಇರಬೇಕಲ್ಲವೇ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಶುಸಂಗೋಪನಾ ಇಲಾಖೆಯ ೨ ಎಕರೆ ಭೂಮಿಯನ್ನು ಮುಸ್ಲಿಮರಿಗೆ ಕೊಡುವುದು ನಿಮ್ಮ ಸಂಚಾಗಿದೆ. ಗೋವು ಮತ್ತಿತರ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಸರಕಾರಿ ಪಶುವೈದ್ಯಕೀಯ ಆಸ್ಪತ್ರೆಯನ್ನು ಮುಚ್ಚಿ ಆ ಜಾಗವನ್ನು ಮುಸ್ಲಿಮರಿಗೆ ನೀಡುವ ಅಗತ್ಯ ಏನಿತ್ತು ? ಪಶುವೈದ್ಯಕೀಯ ಆಸ್ಪತ್ರೆಯನ್ನು ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಸ್ಥಾಪಿಸಲಾಯಿತು, ಆದರೆ ಇತರ ಸಾಕುಪ್ರಾಣಿಗಳಿಗೂ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ೫೦೦ ಕೋಟಿ ಭೂಮಿ ಹಸ್ತಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್‌ನ ಈ ನಿರ್ಧಾರವನ್ನು ‘ಲ್ಯಾಂಡ್ ಜಿಹಾದ್’ ಎನ್ನಬಹುದೇ?, ಎಂದಿದ್ದಾರೆ
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim