ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿರುವ ಪಾಕಿಸ್ತಾನದಿಂದ ಅಮೇರಿಕಾದ ಬಗ್ಗೆಯೇ ಕೆಂಗಣ್ಣು
ಇಸ್ಲಾಮಾಬಾದ (ಪಾಕಿಸ್ತಾನ) – ಯಾವುದೇ ದೇಶವು ಪಾಕಿಸ್ತಾನಕ್ಕೆ ಆದೇಶ ನೀಡಲು ಸಾಧ್ಯವಿಲ್ಲ. ಪಾಕಿಸ್ತಾನ ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರವಾಗಿದೆ. ಪಾಕಿಸ್ತಾನದ ಆಂತರಿಕ ವಿಷಯಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳುವ ಅಧಿಕಾರ ನಮಗಿದೆಯೆಂದು, ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಮುಮ್ತಾಜ್ ಝಹರಾ ಬಲೂಚ ಇವರು ಅಮೇರಿಕೆಯ ಹೇಳಿಕೆಯ ಬಗ್ಗೆ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಫೆಬ್ರವರಿ 8ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಸಂದರ್ಭದಲ್ಲಿ ಅಮೇರಿಕಾದ ವಿದೇಶಾಂಗ ಖಾತೆಗೆ ಪ್ರಶ್ನೆಯನ್ನು ಕೇಳಿದಾಗ, ವಿದೇಶಾಂಗ ಸಚಿವಾಲಯದ ವಕ್ತಾರ ಮ್ಯಾಟ ಮಿಲ್ಲರ ಮಾತನಾಡಿ, ಚುನಾವಣೆಯ ಯಾವುದೇ ತಥಾಕಥಿತ ಅವ್ಯವಹಾರ ಸಂಪೂರ್ಣ ಪಾರದರ್ಶಕತೆ ಮತ್ತು ನಿಃಪಕ್ಷಪಾತ ರೀತಿಯಲ್ಲಿ ವಿಚಾರಣೆ ನಡೆಯಬೇಕು. ಪಾಕಿಸ್ತಾನದ ಚುನಾವಣೆಯಲ್ಲಿ ನಡೆದ ಅವ್ಯವಹಾರ ಆರೋಪಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಈ ಪ್ರಕರಣದ ಬಗ್ಗೆ ಆದಷ್ಟು ಬೇಗನೆ ಮತ್ತು ಸೂಕ್ತ ರೀತಿಯಲ್ಲಿ ತನಿಖೆ ಆಗಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.