ನವದೆಹಲಿ – ಏಪ್ರಿಲ್ 11 ರಂದು ಬೇಸಿಗೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಷ್ಣತೆಯ ಪರಿಸ್ಥಿತಿಯ ಸಿದ್ಧತೆಯ ಕುರಿತು ವರದಿಯನ್ನು ಪಡೆದರು. ಪ್ರಧಾನಿ ಮೋದಿ, ಕೇಂದ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡುವಂತೆ ಕೇಳಿಕೊಂಡರು. ಈ ಸಭೆಯಲ್ಲಿ ಪ್ರಧಾನ ಮಂತ್ರಿಗಳ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಭಾರತೀಯ ಹವಾಮಾನ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಪಸ್ಥಿತರಿದ್ದರು. ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಉಷ್ಣತೆಯ ಅಲೆ ಬರುವ ಸಾಧ್ಯತೆ ಹೆಚ್ಚಿದೆ.