ತಿಥಿ : ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮತಿಥಿಯಾಗಿದೆ ಮತ್ತು ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮಂತನ ಜನ್ಮತಿಥಿ ಯಾಗಿದೆ. ಕರ್ನಾಟಕದಲ್ಲಿ ಹನುಮಂತ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ.
ಮಹತ್ವ : ಹನುಮಂತ ಜಯಂತಿ ಯಂದು ಹನುಮಂತ ತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ತಿಥಿಯಂದು ‘ಶ್ರೀ ಹನುಮತೇ ನಮಃ |’ ನಾಮಜಪ, ಹಾಗೆಯೇ ಹನುಮಂತನ ಇತರ ಉಪಾಸನೆಯನ್ನು ಭಾವಪೂರ್ಣ ವಾಗಿ ಮಾಡುವುದರಿಂದ ಹನುಮಂತತತ್ತ್ವದ ಲಾಭವು ಹೆಚ್ಚೆಚ್ಚು ದೊರೆಯಲು ಸಹಾಯವಾಗುತ್ತದೆ.
ಉತ್ಸವವನ್ನು ಆಚರಿಸುವ ಪದ್ಧತಿ : ಈ ದಿನ ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ. ನಂತರ ಹನುಮಂತನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಎಲ್ಲರಿಗೂ ಪ್ರಸಾದವೆಂದು ಶುಂಠಿಚೂರ್ಣವನ್ನು ಕೊಡುತ್ತಾರೆ.
(ಸನಾತನ ನಿರ್ಮಿತ ಗ್ರಂಥ : ಧಾರ್ಮಿಕ ಉತ್ಸವ ಮತ್ತು ವ್ರತಗಳ ಹಿಂದಿನ ಶಾಸ್ತ್ರ )
ಹೇ ಮಾರುತಿ, ನೀನು ಶ್ರೀರಾಮಚಂದ್ರನ ದಾಸ್ಯ ಭಕ್ತಿಯನ್ನು ಮಾಡಿದಂತೆಯೇ ನನಗೂ ಭಕ್ತಿ ಮಾಡಲು ಕಲಿಸು ! ಧರ್ಮರಕ್ಷಣೆಗಾಗಿ ನನಗೆ ಭಕ್ತಿ ಮತ್ತು ಶಕ್ತಿಯನ್ನು ಕೊಡು, ಇದೇ ನಿನ್ನ ಚರಣಗಳಲ್ಲಿ ಪ್ರಾರ್ಥನೆ !