ಶ್ರೀರಾಮ ನವಮಿ (ಏಪ್ರಿಲ್‌ ೧೭)

.

ಇತಿಹಾಸ : ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥ ಚೈತ್ರ ಶುಕ್ಲ ನವಮಿಯಂದು ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿ ದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮನ ಜನ್ಮವಾಯಿತು.

ಮಹತ್ವ : ದೇವತೆಗಳು ಮತ್ತು ಅವತಾರಗಳ ಜನ್ಮತಿಥಿ ಯಂದು ಭೂಮಿಯ ಮೇಲೆ ಅವರ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಶ್ರೀರಾಮನವಮಿಯಂದು ಶ್ರೀರಾಮತತ್ತ್ವವು ಎಂದಿ ಗಿಂತ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯನಿರತ ವಾಗಿರುತ್ತದೆ. ಶ್ರೀರಾಮ ನವಮಿಗೆ ‘ಶ್ರೀರಾಮ ಜಯ ರಾಮ ಜಯ ಜಯ ರಾಮ |’ ಎಂಬ ನಾಮಜಪ, ಹಾಗೆಯೇ ಭಾವಪೂರ್ಣವಾಗಿ ಶ್ರೀರಾಮನ ಇತರ ಉಪಾಸನೆಗಳಿಂದ ಶ್ರೀರಾಮ ತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆಯಲು ಸಹಾಯವಾಗುತ್ತದೆ.

ಉತ್ಸವವನ್ನು ಆಚರಿಸುವ ಪದ್ಧತಿ : ‘ಅನೇಕ ರಾಮ ಮಂದಿರಗಳಲ್ಲಿ ಚೈತ್ರ ಶುಕ್ಲ ಪ್ರತಿಪದೆಯಿಂದ ಒಂಭತ್ತು ದಿನಗಳ ಕಾಲ ಈ ಉತ್ಸವವು ನಡೆಯುತ್ತದೆ. ರಾಮಾಯಣದ ಪಾರಾಯಣ, ಹರಿಕಥೆ ಮತ್ತು ರಾಮನ ಮೂರ್ತಿಗೆ ವಿವಿಧ ಶೃಂಗಾರ ಮಾಡಿ ಉತ್ಸವ ಆಚರಿಸುತ್ತಾರೆ. ನವಮಿ ಯಂದು ಮಧ್ಯಾಹ್ನ ರಾಮ ಜನ್ಮದ ಕೀರ್ತನೆ ಯಾಗು ತ್ತದೆ. ಮಧ್ಯಾಹ್ನ ಕುಂಚಿಗೆ (ಮಗುವಿನ ತಲೆಗೆ ಕಟ್ಟುವ ವಸ್ತ್ರ. ಈ ವಸ್ತ್ರವು ಬೆನ್ನಿನವರೆಗೆ ಇರುತ್ತದೆ.) ಹಾಕಿದ ತೆಂಗಿನಕಾಯಿಯನ್ನು ತೊಟ್ಟಿಲಿನಲ್ಲಿಟ್ಟು ತೂಗುತ್ತಾರೆ. ಭಕ್ತರು ಅದಕ್ಕೆ ಗುಲಾಲು ಮತ್ತು ಹೂವುಗಳನ್ನು ಅರ್ಪಿಸುತ್ತಾರೆ.’ (ಕೆಲವು ಕಡೆ ತೆಂಗಿನಕಾಯಿಯ ಬದಲು ಶ್ರೀರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿಡುತ್ತಾರೆ. – ಸಂಕಲನಕಾರರು) ಈ ಸಂದರ್ಭದಲ್ಲಿ ಶ್ರೀರಾಮನ ಜನ್ಮದ ಗೀತೆಯನ್ನು ಹೇಳಲಾಗುತ್ತದೆ.’ ಅನಂತರ ಶ್ರೀರಾಮನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಪ್ರಸಾದ ವೆಂದು ಶುಂಠಿಚೂರ್ಣವನ್ನು ಮತ್ತು ಕೆಲವೆಡೆ ಶುಂಠಿ ಚೂರ್ಣದೊಂದಿಗೆ ಮಹಾಪ್ರಸಾದವನ್ನೂ ನೀಡುತ್ತಾರೆ.

(ಸನಾತನ ನಿರ್ಮಿತ ಗ್ರಂಥ : ಧಾರ್ಮಿಕ ಉತ್ಸವ ಮತ್ತು ವ್ರತಗಳ ಹಿಂದಿನ ಶಾಸ್ತ್ರ )