ಸಿಡ್ನಿ (ಆಸ್ಟ್ರೇಲಿಯಾ)ಯ ಚರ್ಚ್‌ನಲ್ಲಿ ಪಾದ್ರಿಯ ಮೇಲೆ ಮಾರಣಾಂತಿಕ ಹಲ್ಲೆ !

ಸಿಡ್ನಿ (ಆಸ್ಟ್ರೇಲಿಯಾ) – ಇಲ್ಲಿ ಮತ್ತೊಂಮ್ಮೆ ಚೂರಿ ಇರಿದ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಬಿಷಪ್ (ಹಿರಿಯ ಪಾದ್ರಿ) ಮೇಲೆ ದಾಳಿ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದಾಳಿಯಲ್ಲಿ ಬಿಷಪ್ ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸಿಡ್ನಿ ಅಧಿಕಾರಿಗಳು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಿಡ್ನಿಯ ವಾಣಿಜ್ಯ ಸಂಕೀರ್ಣವೊಂದರಲ್ಲಿ 6 ಮಂದಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಬಿಷಪ್ ಮಾರಿ ಇಮ್ಯಾನುಯೆಲ್ ಅವರು ವೇಕ್ಲಿಯಲ್ಲಿರುವ ‘ಕ್ರೈಸ್ಟ್ ದಿ ಗುಡ್ ಶೆಫರ್ಡ್’ ಚರ್ಚ್‌ನಲ್ಲಿ ಸಂಜೆ 7 ಗಂಟೆಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಅವರ ಬಳಿಗೆ ಬಂದ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ತಲೆಗೆ ಹಲವು ಬಾರಿ ಇರಿದಿದ್ದಾನೆ. ಈ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.