ಏಪ್ರಿಲ್ 19 ರಂದು ಲೋಕಸಭೆಗೆ ಮೊದಲ ಹಂತದ ಮತದಾನ !

ನವ ದೆಹಲಿ – ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತಿದೆ. ಈ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ 16 ಕೋಟಿ 63 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.