ನೇಹಾ ಹಿರೇಮಠ ಕೊಲೆ ಪ್ರಕರಣ
ಹುಬ್ಬಳ್ಳಿ – ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಅವರನ್ನು ಫೈಯಾಜ್ ಹತ್ಯೆ ಮಾಡಿದ ಬೆನ್ನಲ್ಲೇ ಮುಸ್ಲಿಂ ಮುಖಂಡರು ಹಿರೇಮಠ್ ಅವರ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ಈ ವೇಳೆ ಸಮಿತಿಯ ಸದಸ್ಯರು ‘ಆರೋಪಿ ಫೈಯಾಜ್ ಪರ ಯಾರೂ ವಕಾಲತ್ತು ವಹಿಸಬಾರದು, ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆ ರೀತಿ ಹೊಸ ಕಾನೂನು ಬರಬೇಕು’ ಎಂದು ಹೇಳುತ್ತಾ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಧೈರ್ಯ ನೀಡಲು ಪ್ರಯತ್ನಿಸಿದರು. ಇದಲ್ಲದೇ ಕಾಂಗ್ರೆಸ್ ಮುಖಂಡ ಅಲ್ತಾಫ್ ಹಳ್ಳೂರು, ನಗರಸಭೆ ಸದಸ್ಯ ನಜೀರ್ ಅಹ್ಮದ್ ಹೊನ್ಯಾಳ್, ಆರೀಫ್ ಭದ್ರಾಪುರ, ಇಲ್ಯಾಸ್ ಮನಿಯಾರ್ ಸೇರಿದಂತೆ ಹಲವು ಮುಖಂಡರು ಹಿರೇಮಠ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
(ಸೌಜನ್ಯ – Zee Kannada News)
ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸದ ಕಾರಣ, ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ! – ನಿರಂಜನ ಹಿರೇಮಠ ಆಗ್ರಹ
ನೇಹಾ ಹತ್ಯೆಗೆ ಸಂಬಂಧಿಸಿದಂತೆ ನಾನು 8 ಜನರ ಹೆಸರನ್ನು ಪೊಲೀಸರಿಗೆ ನೀಡಿದ್ದೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ್ ಹೇಳಿದ್ದಾರೆ. ಅವರು ಇನ್ನೂ ಒಬ್ಬರನ್ನೂ ಬಂಧಿಸಿಲ್ಲ. ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲಿನ ಕಮಿಷನರ್ ಮಹಿಳೆಯಾಗಿದ್ದಾರೆ, ಆದರೂ ಹುಡುಗಿಯ ಹತ್ಯೆಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆಯುಕ್ತರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ನನ್ನ ನಂಬಿಕೆ ಈಗ ಹೋಗಿದೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವ ಆಯುಕ್ತರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.