Order by Calcutta HC: ಹಿಂಸಾಚಾರ ನಡೆದಲ್ಲಿ ಚುನಾವಣೆ ನಡೆಸಬಾರದು ! – ಕೊಲಕಾತಾ ಉಚ್ಚ ನ್ಯಾಯಾಲಯ

ರಾಮನವಮಿ ಸಂದರ್ಭದಲ್ಲಿ ಮುರ್ಷಿದಾಬಾದ್ (ಬಂಗಾಳ) ಹಿಂಸಾಚಾರದ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲಕಾತಾ ಹೈಕೋರ್ಟ್ ಆದೇಶ

ಮುರ್ಷಿದಾಬಾದ್ (ಬಂಗಾಳ) – ಜಿಲ್ಲೆಯಲ್ಲಿ ನಡೆದ ರಾಮನವಮಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲಕಾತಾ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ದಾಖಲಿಸಲಾಗಿತ್ತು. ಅದನ್ನು ಆಲಿಸಿದ ನ್ಯಾಯಾಲಯ, ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಇದರೊಂದಿಗೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಬರ್ಹಾಂಪುರ ಕ್ಷೇತ್ರದ ಚುನಾವಣೆಯನ್ನು ಮುಂದೂಡುವಂತೆ ನ್ಯಾಯಾಲಯ ಚುನಾವಣಾ ಆಯೋಗವನ್ನು ಕೇಳಿದೆ.

(ಸೌಜನ್ಯ – India Today)

ಈ ವೇಳೆ ಕೋರ್ಟ್, ‘ಜನರು 24 ಗಂಟೆಗಳ ಕಾಲ ಯಾವುದೇ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಾಧ್ಯವಾಗದಿದ್ದರೆ ಅಂತಹ ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಸಬಾರದು. ಆದರ್ಶ ನೀತಿ ಸಂಹಿತೆಯ ಹೊರತಾಗಿಯೂ ಎರಡು ಗುಂಪುಗಳ ಜನರು ಜಗಳವಾಡುತ್ತಿದ್ದರೆ, ಅವರ ಪ್ರತಿನಿಧಿಗಳಿಗೆ ಮತ ಚಲಾಯಿಸುವ ಹಕ್ಕಿಲ್ಲ.” ಎಂದು ಹೇಳಿದೆ.

ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ (‘ಎನ್‌.ಐ.ಎ.) ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಮುಂದಿನ ವಿಚಾರಣೆ ಏಪ್ರಿಲ್ 26 ರಂದು ನಡೆಯಲಿದೆ.

ಸಂಪಾದಕೀಯ ನಿಲುವು

ಇದು ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ನಾಚಿಕೆಗೇಡು ! ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಚುನಾವಣೆಗಳು ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೈಕೋರ್ಟ್ ಭಾವಿಸಿರುವುದನ್ನು ನೋಡಿದರೆ ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ತಿಳಿಯಬಹುದು. ಈ ಪರಿಸ್ಥಿತಿ ನೋಡಿದರೆ ಕೇಂದ್ರ ಸರ್ಕಾರ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವುದು ಅನಿವಾರ್ಯವಾಗಿದೆ !