ತಮಿಳುನಾಡು: ಇಲ್ಲಿಯವರೆಗೆ 1,309 ಕೋಟಿ ರೂಪಾಯಿ ನಗದು ಮತ್ತು ಚಿನ್ನ ವಶ !

ಚೆನ್ನೈ – ತಮಿಳುನಾಡಿನಲ್ಲಿ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಒಂದು ಸಾವಿರದ 309 ಕೋಟಿ 52 ಲಕ್ಷ ರೂಪಾಯಿ ನಗದು, ಮದ್ಯ, ಚಿನ್ನ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ನೀತಿ ಸಂಹಿತೆ ಜಾರಿಯಾಗಿದೆ. ಒಟ್ಟು ಮೊತ್ತದಲ್ಲಿ 179 ಕೋಟಿ 91 ಲಕ್ಷ ಕೋಟಿ ರೂಪಾಯಿ ನಗದು ಮತ್ತು 1 ಸಾವಿರದ 83 ಕೋಟಿ 78 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಇತರ ಅಮೂಲ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರತ ಸಾಹು ತಿಳಿಸಿದ್ದಾರೆ. ಇದರೊಂದಿಗೆ 8 ಕೋಟಿ 65 ಲಕ್ಷ ರೂಪಾಯಿ ಮೌಲ್ಯದ ಮದ್ಯ, 1 ಕೋಟಿ, 36 ಲಕ್ಷ ರೂಪಾಯಿ ಮೌಲ್ಯದ ಅಮಲು ಪದಾರ್ಥ ಮತ್ತು 35 ಕೋಟಿ 8 ಲಕ್ಷ ರೂಪಾಯಿ ಬೆಲೆ ಬಾಳುವ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ತೆಲಂಗಾಣದಲ್ಲಿ 202 ಕೋಟಿ ಮೌಲ್ಯದ ವಸ್ತು ವಶಕ್ಕೆ

ತೆಲಂಗಾಣದಲ್ಲಿ ಇದುವರೆಗೆ 202 ಕೋಟಿ 52 ಲಕ್ಷ ರೂಪಾಯಿ ಮೌಲ್ಯದ ನಗದು, ಮದ್ಯ, ಚಿನ್ನ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಮೊತ್ತದಲ್ಲಿ 76 ಕೋಟಿ 65 ಲಕ್ಷ ರೂಪಾಯಿ ನಗದು, 29 ಕೋಟಿ 62 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ಇತರ ಅಮೂಲ್ಯ ವಸ್ತುಗಳು ಸೇರಿವೆ. ಮುಖ್ಯ ಚುನಾವಣಾಧಿಕಾರಿ ಹೇಳಿಕೆ ಪ್ರಕಾರ, ಇದರೊಂದಿಗೆ 43 ಕೋಟಿ 57 ಲಕ್ಷ ರೂಪಾಯಿ ಮೌಲ್ಯದ ಮದ್ಯ, 26 ಕೋಟಿ 12 ಲಕ್ಷ ರೂಪಾಯಿ ಮೌಲ್ಯದ ಮಾದಕ ಪದಾರ್ಥ ಮತ್ತು 26 ಕೋಟಿ 54 ಲಕ್ಷ ರೂಪಾಯಿ ಮೌಲ್ಯದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.