ರಾಹುಲ ಗಾಂಧಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತದ ಉಪಕುಲಪತಿಗಳ ಬೇಡಿಕೆ !

ಭಾರತದಲ್ಲಿ ಉಪಕುಲಪತಿಗಳ ನೇಮಕಾತಿಯಲ್ಲಿ ಸಂದೇಹ ವ್ಯಕ್ತಪಡಿಸಿದ ಪ್ರಕರಣ

ರಾಹುಲ ಗಾಂಧಿ

ನವ ದೆಹಲಿ – ಭಾರತದಲ್ಲಿರುವ ವಿಶ್ವವಿದ್ಯಾಲಯಗಳಲ್ಲಿ ಉಪಕುಲಪತಿಗಳ ನೇಮಕವನ್ನು ಅವರ ಅರ್ಹತೆಯ ಬದಲಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗುತ್ತಿದೆಯೆಂದು ಕಾಂಗ್ರೆಸ ನಾಯಕ ರಾಹುಲ ಗಾಂಧಿ ಆರೋಪಿಸಿದ್ದರು. ಈ ಹೇಳಿಕೆಗೆ ವಿಶ್ವ ವಿದ್ಯಾಲಯದ ಹಲವು ಉಪಕುಲಪತಿಗಳು ಹಾಗೂ ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ 181 ಉಪಕುಲಪತಿಗಳು ಮತ್ತು ಶಿಕ್ಷಣ ತಜ್ಞರು ಬಹಿರಂಗ ಪತ್ರ ಬರೆದಿದ್ದಾರೆ. ಅವರು ಉಪಕುಲಪತಿಗಳ ನೇಮಕ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ರಾಹುಲ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಶಿಕ್ಷಣತಜ್ಞರು ಒಂದು ಬಹಿರಂಗ ಪತ್ರದಲ್ಲಿ, ಉಪಕುಲಪತಿಗಳ ಆಯ್ಕೆ ಪ್ರಕ್ರಿಯೆಯು ಕಠಿಣ ಮತ್ತು ಪಾರದರ್ಶಕವಾಗಿದ್ದು, ಗುಣಮಟ್ಟ, ಶೈಕ್ಷಣಿಕ ಅರ್ಹತೆ ಮತ್ತು ನಿಷ್ಠೆ ಈ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಈ ಆಯ್ಕೆಯು ಸಂಪೂರ್ಣವಾಗಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕೌಶಲ್ಯಗಳನ್ನು ಆಧರಿಸಿದೆ. ಅದನ್ನು ವಿಶ್ವವಿದ್ಯಾಲಯದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲುವು

ಸಂಘದ್ವೇಷದ ಕಾಮಾಲೆಯಾಗಿರುವವರಿಗೆ ಪ್ರತಿಯೊಂದರಲ್ಲೂ ಅದೇ ದೃಷ್ಟಿಕೋನದಿಂದ ನೋಡುವುದು ರೂಢಿಯಾಗಿದೆಯೆಂದು ಹೇಳಿದರೆ ತಪ್ಪಾಗಲಾರದು !