7 Crore Cash Found In AP: ಆಂಧ್ರಪ್ರದೇಶದಲ್ಲಿ ಪಲ್ಟಿಯಾಗಿದ್ದ ಟೆಂಪೊದಲ್ಲಿ 7 ಕೋಟಿ ರೂಪಾಯಿ ಪತ್ತೆ !

ಪೂರ್ವ ಗೋದಾವರಿ (ಆಂಧ್ರಪ್ರದೇಶ) – ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅನಂತಪಲ್ಲಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಪಲ್ಟಿಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಾಗ ಟೆಂಪೋದಲ್ಲಿ 7 ಬಾಕ್ಸ್ ಗಳಲ್ಲಿ ಇರಿಸಲಾಗಿದ್ದ 7 ಕೋಟಿ ರೂಪಾಯಿ ನಗದು ಹಣ ಸಿಕ್ಕಿದೆ. ಇದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದಲ್ಲಿ ವಾಹನ ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಪಾದಕೀಯ ನಿಲುವು

ಚುನಾವಣೆಯ ಸಮಯದಲ್ಲಿ ದೇಶದಲ್ಲಿ ಸಾವಿರಾರು ಕೋಟಿ ನಗದು ಪತ್ತೆಯಾಗುತ್ತದೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಅತ್ಯಂತ ಕೆಟ್ಟ ವಿಷಯವಾಗಿದೆ. ಈ ಹಣ ಕೊಟ್ಟು ವೋಟು ಕೊಳ್ಳಲು ಬಳಸುತ್ತಾರೆ ಎಂಬುದು ಜನರಿಗೆ ಗೊತ್ತಿದ್ದರೂ ಯಾವ ರಾಜಕೀಯ ಪಕ್ಷವೂ ಇದರ ಬಗ್ಗೆ ಬಾಯಿ ಬಿಡುವುದಿಲ್ಲ ಎಂಬುದನ್ನು ಗಮನಿಸಿ !