ಇಂತಹವರನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಿ ಗಲ್ಲು ಶಿಕ್ಷೆಯಾಗುವಂತೆ ಸರ್ಕಾರವು ಪ್ರಯತ್ನಿಸಬೇಕು !
ಭರೂಚ್ (ಗುಜರಾತ್) – ಗುಜರಾತ್ ಪೊಲೀಸರು ಅಂಕಲೇಶ್ವರದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಪ್ರವೀಣ್ ಮಿಶ್ರಾನನ್ನು ಬಂಧಿಸಿದ್ದಾರೆ. ಪ್ರವೀಣ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಕೆಲಸ ಮಾಡುತ್ತಿದ್ದ. ಆತ ಭಾರತೀಯ ಭದ್ರತಾ ಪಡೆಗಳು ಬಳಸುವ ಕ್ಷಿಪಣಿ ಮತ್ತು ಡ್ರೋನ್ ತಂತ್ರಜ್ಞಾನದ ಬಗ್ಗೆ ಐಎಸ್‌ಐಗೆ ಮಹತ್ವದ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರವೀಣ್ ಇಸ್ಲಾಮಾಬಾದ್ ಮತ್ತು ಕರಾಚಿಯಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಮತ್ತು ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸ್‌ಆ್ಯಪ್ ಮೂಲಕ ಮಾಹಿತಿ ರವಾನೆಯಾಗುತ್ತಿತ್ತು. ಪ್ರವೀಣ್ ಜಿಐಡಿಸಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ವಾಯುಪಡೆಯ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ.
An engineer working for a company in Hyderabad that makes parts for missiles and drones was arrested in Bharuch, Gujarat. He’s accused of spying for Pakistan by collecting secret information about India’s military and sharing it with them.https://t.co/ODCJShXyEe
— The Siasat Daily (@TheSiasatDaily) May 10, 2024