ಓರ್ವ ಸೈನಿಕನ ಮೇಲೆ ಹಲ್ಲೆ
ಮುಜಫ್ಫರಾಬಾದ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) – ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯ ನಾಗರಿಕರು ಸರಕಾರ, ಪಾಕಿಸ್ತಾನ ಸೇನೆ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಗುಂಡು ತಗುಲಿ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದರೆ, ಓರ್ವ ಸೈನಿಕನ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಸ್ಥಿತಿ ಹದಗೆಡುತ್ತಿರುವುದನ್ನು ಕಂಡ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದರು.
1 policeman killed in violence in Pakistan Occupied Kashmir (POJK) !
A soldier was beaten up and more than 100 people were injured due to this agitation.#HumanRights #AzadKashmir #POK_Wants_Freedom https://t.co/NOKHc3kleX
— Sanatan Prabhat (@SanatanPrabhat) May 12, 2024
ಈ ಆಂದೋಲನದಿಂದಾಗಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೀರಪುರ, ಆಜಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಸತತ ಎರಡನೇ ದಿನವೂ ಮಾರುಕಟ್ಟೆಗಳು, ಶಾಲೆಗಳು ಮತ್ತು ಕಚೇರಿಗಳು ಮುಚ್ಚಲ್ಪಟ್ಟಿವೆ. ಪ್ರತಿಭಟನಾಕಾರರ ನಿವಾಸಗಳು ಹಾಗೂ ಮುಜಪ್ಫರಾಬಾದ ಮತ್ತು ಮೀರಪುರ ಪ್ರದೇಶಗಳಲ್ಲಿನ ಅವರ ಸಂಬಂಧಿಕರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.