ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಹಾಗೂ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕ್ಯಾನ್ಸರ್ ನಿಂದ ಮೇ 13 ರಂದು ನಿಧನರಾದರು. 72 ವರ್ಷ ವಯಸ್ಸಿನವರಾಗಿದ್ದ ಸುಶೀಲ್ ಕುಮಾರ್ ಅವರು ಅಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವನ್ನು ಬಿಹಾರದ ರಾಜಧಾನಿ ಪಾಟಲೀಪುತ್ರದಲ್ಲಿ ಮಾಡಲಾಯಿತು. ಈ ವಿಷಾದಕರ ಘಟನೆ ಬಗ್ಗೆ ‘ಎಕ್ಸ್ ‘ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನನ್ನ ಸ್ನೇಹಿತ ಸುಶೀಲ್ ಮೋದಿ ಅವರ ಆಕಸ್ಮಿಕ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಬರೆದಿದ್ದಾರೆ. ಬಿಹಾರದಲ್ಲಿ ಬಿಜೆಪಿಯ ಉದಯ ಮತ್ತು ಯಶಸ್ಸಿಗೆ ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರು ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ್ದರು. ಅವರು ವಿದ್ಯಾರ್ಥಿದಿಶೆಯಲ್ಲಿಯೇ ರಾಜಕೀಯದಲ್ಲಿ ತಮ್ಮ ಸ್ಥಾನವನ್ನು ಪಡೆದಿದ್ದರು. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.
पार्टी में अपने मूल्यवान सहयोगी और दशकों से मेरे मित्र रहे सुशील मोदी जी के असामयिक निधन से अत्यंत दुख हुआ है। बिहार में भाजपा के उत्थान और उसकी सफलताओं के पीछे उनका अमूल्य योगदान रहा है। आपातकाल का पुरजोर विरोध करते हुए, उन्होंने छात्र राजनीति से अपनी एक अलग पहचान बनाई थी। वे… pic.twitter.com/160Bfbt72n
— Narendra Modi (@narendramodi) May 13, 2024