ಪಾಕ ಆಕ್ರಮಿತ ಕಾಶ್ಮೀರದಲ್ಲಿನ ನಾಗರಿಕರು ಶೋಷಣೆಗೆ ಒಳಗಾಗಿದ್ದಾರೆ! – ಭಾರತ

ನವದೆಹಲಿ: ಪಾಕ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯ ನಾಗರಿಕರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಚಳವಳಿಯಲ್ಲಿ ಕೆಲವರು ಮರಣ ಹೊಂದಿದ್ದಾರೆ.. ಈ ವಿಷಯದಲ್ಲಿ ಭಾರತ ಮೊದಲ ಬಾರಿಗೆ ತನ್ನ ಅಭಿಪ್ರಾಯವನ್ನು ಮಂಡಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ ಇವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಕೆಲವು ದಿನಗಳಿಂದ ಪಾಕ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ವರದಿಯಾಗುತ್ತಿದೆ. ಇದರಿಂದ ಅಲ್ಲಿನ ಸಂಪನ್ಮೂಲಗಳ ಲೂಟಿಯಾಗುತ್ತಿದೆ. ಜನರನ್ನು ಅವರ ಹಕ್ಕುಗಳಿಂದ ವಂಚಿತಗೊಳಿಸಲಾಗುತ್ತಿದೆ ಮತ್ತು ಅಲ್ಲಿನ ಆಡಳಿತವು ಅವರ ಶೋಷಣೆ ಮಾಡುತ್ತಿದೆ ಎಂದು ಹೇಳಿದ್ದಾರೆ.