Minor Boy Bail Denied: ಅಪ್ರಾಪ್ತ ಬಾಲಕಿಯ ಅಶ್ಲೀಲ ವಿಡಿಯೋ ಪ್ರಸಾರ ಮಾಡಿದ ಅಪ್ರಾಪ್ತ ಬಾಲಕನಿಗೆ ಜಾಮೀನು ನಿರಾಕರಣೆ !

ಸುಪ್ರೀಂ ಕೋರ್ಟ್‌ನ ತೀರ್ಪು!

ನವದೆಹಲಿ – ಉತ್ತರಾಖಂಡ್‌ನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 14 ವರ್ಷದ ಬಾಲಕಿಯನ್ನು ಆಕೆಯ ಸಹಪಾಠಿಯೇ ಅಶ್ಲೀಲ ವಿಡಿಯೋ ಮಾಡಿ ಅದನ್ನು ತನ್ನ ಸಹಪಾಠಿಗಳಲ್ಲಿ ಪ್ರಸಾರ ಮಾಡಿದನು. ಮಾನಹಾನಿ ಮಾಡಿದ ಆಘಾತದಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಅಕ್ಟೋಬರ್ 2023 ರಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಹುಡುಗನಿಗೆ ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ನಿರಾಕರಿಸಿದೆ.

ಬಾಲಕನಿಗೆ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಜಾಮೀನು ನಿರಾಕರಿಸುವ ಬಗ್ಗೆ ಉಚ್ಚ ನ್ಯಾಯಾಲಯವು, ಹುಡುಗ ಅಶಿಸ್ತಿನಲ್ಲಿದ್ದೂ ತಪ್ಪು ಚಟಕ್ಕೆ ಬಿದ್ದಿದ್ದಾನೆ. ಅವನಿಗೆ ಕಟ್ಟುನಿಟ್ಟಾದ ಶಿಸ್ತು ಬೇಕು. ಅವನನ್ನು ಬಿಡುಗಡೆ ಮಾಡಿದರೆ ಇನ್ನಷ್ಟು ಅನಾಹುತಗಳು ಸಂಭವಿಸಬಹುದು. ಹೀಗಾಗಿ ಅವನಿಗೆ ಜಾಮೀನು ನೀಡುವುದು ಸರಿಯಲ್ಲ ಎಂದು ಹೇಳಿದೆ.

ಈ ಬಗ್ಗೆ ಮಗುವಿನ ತಾಯಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಅರ್ಜಿ ಕುರಿತು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದು ಬಾಲಕನಿಗೆ ಜಾಮೀನು ನೀಡಲು ನಿರಾಕರಿಸಿದರು.