ಸಿಎಂ ಕೇಜ್ರಿವಾಲ್‌ಗೆ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ ! 

ನವದೆಹಲಿ – ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಅಂಕಿತ್ ಗೋಯಲ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ದೆಹಲಿ ಮೆಟ್ರೋ ರೈಲು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಬೆದರಿಕೆ ಸಂದೇಶಗಳನ್ನು ಬರೆದಿದ್ದನು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯು ಈ ಸಂದೇಶದಲ್ಲಿ ಕೇಜ್ರಿವಾಲ್ ಅವರನ್ನು ದೆಹಲಿ ತೊರೆಯುವಂತೆ ಕೇಳಿದ್ದಾರೆ. ಹಾಗೆ ಮಾಡದಿದ್ದರೇ ಅವರಿಗೆ ಚುನಾವಣೆಯ ಮೊದಲು ಸಿಕ್ಕಿದ ಮೂರು ಕಪಾಳಮೋಕ್ಷಗಳನ್ನು ನೆನಪಿಸಿದೆ. ಅವರ ನಿವಾಸಕ್ಕಾಗಿ 45 ಕೋಟಿ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಆ ಸಂದೇಶದಲ್ಲಿ ಬರೆಯಲಾಗಿದೆ.