Cow Trafficking: ಎಲಿಮಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ ತಡೆದ ಸ್ಥಳೀಯರು !

ಎಲಿಮಲೆ (ದಕ್ಷಿಣ ಕನ್ನಡ) – ಇತ್ತೀಚೆಗೆ ರಾತ್ರಿ ಸಮಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಹಸುಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ. ರಾತ್ರಿ 3 ಗಂಟೆ ಸುಮಾರಿಗೆ ಎಲಿಮಲೆ ಅಂಬೆಕಲ್ಲು ಕಡೆಯಿಂದ ಪಿಕಪ್ ವಾಹನದಲ್ಲಿ ನಾಲ್ಕು ಹಸುಗಳನ್ನು ಸಾಗಿಸುತ್ತಿರುವ ಬಗ್ಗೆ ಸ್ಥಳೀಯರಿಗೆ ಮಾಹಿತಿ ಸಿಕ್ಕಿದೆ. ಈ ಮಾಹಿತಿ ಮೇರೆಗೆ ಸ್ಥಳೀಯ ಯುವಕರು ವಾಹನವನ್ನು ಅಡ್ಡಗಟ್ಟಿದ್ದಾರೆ. ಆ ಸಂದರ್ಭದಲ್ಲಿ ವಾಹನದಲ್ಲಿದ್ದ ಇಬ್ಬರು ಪರಾರಿಯಾದರು.