Fake Videos on EVM Tampering: ಇವಿಎಂ ವಿರೂಪಗೊಳಿಸುವ ಹಳೆಯ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಗೊಂದಲವನ್ನು ಸೃಷ್ಟಿಸುವ ಪ್ರಯತ್ನ !

ಮುಂಬಯಿ – ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುತ್ತಿದೆ ಮತ್ತು ‘ಇವಿಎಮ್‘ ಯಂತ್ರದ ವಿರೂಪಗೊಳಸಲಾಗುತ್ತಿದೆ ಎಂದು ಹೊರರಾಜ್ಯಗಳ ಹಳೆಯ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರಮಾಡಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಮಾಹಿತಿ ನೀಡಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಲೋಕಸಭೆಯ ಸಾರ್ವತ್ರಿಕ ಚುನಾವಣೆಗೂ ಈ ವಿಡಿಯೊಗೂ ಯಾವುದೇ ಸಂಬಂಧವಿಲ್ಲ. ಮಹಾರಾಷ್ಟ್ರದಲ್ಲಿ ಮತದಾನ ಪ್ರಕ್ರಿಯೆ ಸಂಪೂರ್ಣ ಶಾಂತಿಯುತ ಮತ್ತು ಸುಗಮವಾಗಿ ನಡೆದಿದೆ, ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಛೇರಿಯಿಂದ ಹೇಳಲಾಗಿದೆ.