ಬೆಳ್ಳೂರಿನಲ್ಲಿ ಹಿಂದೂ ಯುವಕರ ಮೇಲೆ ಮತಾಂಧ ಮುಸ್ಲಿಮರಿಂದ ದಾಳಿ; ದೂರು ದಾಖಲಿಸದ ಪೊಲೀಸ್ ಅಮಾನತು !

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸದ ಪೊಲೀಸ ಅಮಾನತು !

ಬೆಳ್ಳೂರು – ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಕುರಿತು ದೂರು ಸ್ವೀಕರಿಸಲು ಪೊಲೀಸ್ ಬಸವರಾಜ ಚಿಂಚೋಳಿ ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪಿಸಲಾಗಿತ್ತು. ದೂರು ದಾಖಲಿಸಲು ನಿರ್ಲಕ್ಷ್ಯ ತೋರಿದ್ದ ಪೊಲೀಸ ಬಸವರಾಜ ಚಿಂಚೋಳಿ ಇವರನ್ನು ಅಮಾನತುಗೊಳಿಸಲಾಗಿದೆ. ಕೆಲವು ಮುಸಲ್ಮಾನರು ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದರು ಎಂದು ಸ್ಥಳೀಯರು ಆರೋಪಿದ್ದಾರೆ. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಗಂಭೀರತೆ ಅರಿತ ಪೊಲೀಸರು 3 ದೂರುಗಳನ್ನು ದಾಖಲಿಸಿದರು. ಬೆನ್ನಲ್ಲೇ ಪೊಲೀಸ್ ಬಸವರಾಜ ಚಿಂಚೋಳಿ ಅವರನ್ನು ಎಸ್‌ಪಿ ಯತೀಶ್ ಅಮಾನತು ಮಾಡಿದ್ದಾರೆ.