ಇಟಾನಗರ (ಅರುಣಾಚಲ ಪ್ರದೇಶ) / ಗ್ಯಾಂಗ್‌ಟಕ್ (ಸಿಕ್ಕಿಂ) – ಲೋಕಸಭೆ ಚುನಾವಣೆಯ ಜೊತೆಗೆ ದೇಶದ 4 ರಾಜ್ಯಗಳಲ್ಲಿ ವಿಧಾನಸಭೆಯ ಚುನಾವಣೆಯೂ ನಡೆಯಿತು. ಅದರಲ್ಲಿ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಮತ ಎಣಿಕೆ ಜೂನ್ 2 ರಂದು ನಡೆಯಿತು. ಅದರಂತೆ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ 60ರಲ್ಲಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದೆ. ಸಿಕ್ಕಿಂನಲ್ಲಿ ‘ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ’ ಪಕ್ಷವು 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಈ ಎರಡೂ ರಾಜ್ಯಗಳಲ್ಲಿ ಏಪ್ರಿಲ್ 19 ರಂದು ಮತದಾನ ನಡೆದಿತ್ತು. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ.