ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣವನ್ನು ಹಿಂಪಡೆಯಿರಿ !

  • ರಸ್ತೆಯಲ್ಲಿ ನಮಾಜ್ ಮಾಡುವವರಿಗೆ ಎಚ್ಚರಿಕೆ ನೀಡಿದ ಪ್ರಕರಣ

  • ವಿಶ್ವಹಿಂದೂ ಪರಿಷತ್ ನಿಂದ ರಾಜ್ಯಪಾಲರಲ್ಲಿ ಮನವಿ

ಮಂಗಳೂರು – ಕಂಕನಾಡಿ ಮಸೀದಿ ಎದುರು ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಎಚ್ಚರಿಕೆ ನೀಡಿದ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ವಿಎಚ್‌ಪಿ ನಿಯೋಗ ರಾಜ್ಯಪಾಲರಿಗೆ ಮನವಿ ನೀಡಿದೆ. ಈ ವೇಳೆ ವಿಎಚ್‌ಪಿ ಜಿಲ್ಲಾಧ್ಯಕ್ಷ ಶ್ರೀ. ಎಚ್.ಕೆ ಪುರುಷೋತ್ತಮ, ಪ್ರಾಂತ್ಯ ಸಹಸೇವಾ ಪ್ರಮುಖರಾದ ಗೋಪಾಲ ಕುತ್ತಾರ್, ರವಿ ಅಸೈಗೋಳಿ, ಗುರುಪ್ರಸಾದ, ನವೀನ್ ಮೂಡುಶೆಡ್ಡೆ ಉಪಸ್ಥಿತರಿದ್ದರು. ‘ಈ ಪ್ರಕರಣದಲ್ಲಿ ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಪೊಲೀಸ್ ಅಧಿಕಾರಿಯ ಕಡ್ಡಾಯ ರಜೆಯನ್ನೂ ರದ್ದುಗೊಳಿಸಬೇಕು’, ಎಂದು ವಿಎಚ್‌ಪಿ ಒತ್ತಾಯಿಸಿದೆ.

ಏನಿದು ಪ್ರಕರಣ ?

ಮಂಗಳೂರು ನಗರದ ಕಂಕನಾಡಿ ಮಸೀದಿ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಕೆಲ ಮತಾಂಧರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣವನ್ನು ತಾವಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್ ಸೋಮಶೇಖರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಇದರೊಂದಿಗೆ, ಈ ಘಟನೆಯ ನಂತರ ‘ಮತ್ತೆ ರಸ್ತೆಯಲ್ಲಿ ನಮಾಜ್ ಮಾಡಿದರೆ, ಬಜರಂಗದಳ ಕ್ರಮ ಕೈಗೊಳ್ಳುತ್ತದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಶರಣ್ ಪಂಪ್ವೆಲ್ ವಿರುದ್ಧವೂ ಪ್ರಕರಣ ದಾಖಲಾಗಿದೆ.