Imran Khan : ರಹಸ್ಯ ಪತ್ರ ಕಳವು ಪ್ರಕರಣದಲ್ಲಿ ಇಮ್ರಾನ್ ಖಾನ್ ಖುಲಾಸೆ

ಇಮ್ರಾನ್ ಖಾನ್

ಇಸ್ಲಾಮಾಬಾದ್ (ಪಾಕಿಸ್ತಾನ) – ರಹಸ್ಯ ಪತ್ರ ಕಳವು ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ನ ಉಚ್ಚ ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಳೆದ ವರ್ಷ ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ತಪ್ಪಿತಸ್ಥರು ಎಂದು ಘೋಷಿಸಲಾಗಿತ್ತು. ದೇಶದ ಖಾಸಗಿತನವನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಶೇಷ ನ್ಯಾಯಾಲಯವು ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು ಇಮ್ರಾನ್ ಖಾನ್ ಮತ್ತು ಶಾ ಮೆಹಮೂದ್ ಖುರೇಷಿ ಇಸ್ಲಾಮಾಬಾದ್ ಉಚ್ಚನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.