EX J&K CM Concedes Defeat: ಲೋಕಸಭೆ ಚುನಾವಣೆಯಲ್ಲಿ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪರಾಭವ !

ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ತಿಹಾರ್ ಜೈಲಿನಿಂದ ಗೆದ್ದರು

ಶ್ರೀನಗರ – ಕೇಂದ್ರ ಸರಕಾರವು ಕಲಂ 370 ರದ್ದು ಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲಬಾರಿ ಚುನಾವಣೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ‘ಯುಎಪಿಎ’ಯ ಅಡಿಯಲ್ಲಿ ತಿಹಾರ್ ಜೈಲಿನಲ್ಲಿರುವ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ಅವರು ಬಾರಾಮುಲ್ಲಾ ಕ್ಷೇತ್ರದಿಂದ ಗೆದ್ದಿದ್ದಾರೆ. ಒಮರ್ ಅಬ್ದುಲ್ಲಾ ಸೋಲನ್ನು ಒಪ್ಪಿಕೊಂಡು ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ಅವರನ್ನು ಅಭಿನಂದಿಸಿದ್ದಾರೆ.