ಜೂನ್ 8 ರ ಬದಲಿಗೆ ಜೂನ್ 9 ರಂದು ಪ್ರಮಾಣ ವಚನ ಸಮಾರಂಭ
ನವ ದೆಹಲಿ : ನರೇಂದ್ರ ಮೋದಿಯವರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಮುಖ್ಯಸ್ಥರಿಗೆ ಆಹ್ವಾನ ಕಳುಹಿಸಲಾಗಿದೆ. ಈ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 8 ಅಥವಾ 9 ರಂದು ನಡೆಯಬಹುದು ಎಂದು ಹೇಳಲಾಗುತ್ತಿದೆ. ಇದುವರೆಗೂ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ.
ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪ್ರಚಂಡ ಹಾಗೆಯೇ ಮಾರಿಷಸ್ ಮತ್ತು ಭೂತಾನ್ ಮುಖ್ಯಸ್ಥರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ವಿಕ್ರಮಸಿಂಘೆ ಅವರು ಚುನಾವಣಾ ವಿಚಾರವಾಗಿ ಪ್ರಧಾನಿ ಮೋದಿಯವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಆ ವೇಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮೋದಿ ಅವರಿಗೆ ಆಹ್ವಾನ ನೀಡಿದರು. ಬಾಂಗ್ಲಾದೇಶದ ಪ್ರಧಾನಿಯೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ, ಮೋದಿಯವರು ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ನೇಪಾಳದ ಪ್ರಧಾನಿ ಪ್ರಚಂಡ ಅವರು ಮೋದಿಯವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಮತ್ತು ರಷ್ಯಾ ಅಧ್ಯಕ್ಷ ಪುಟಿನ್ ಅವರೂ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಅವರ ವಿಜಯೋತ್ಸವಕ್ಕೆ ಅಭಿನಂದನೆ ಸಲ್ಲಿಸಿದರು. ಬ್ರಿಟನ್ ಪ್ರಧಾನಿ ರಿಷಿ ಸುನಕ್, ಮಾಲ್ಡೀವ್ಸ್, ಫ್ರಾನ್ಸ್, ಇಸ್ರೇಲ್, ಜಪಾನ್ ಸೇರಿದಂತೆ 90ಕ್ಕೂ ಹೆಚ್ಚು ನಾಯಕರು ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.