ಅಮೆರಿಕ ಮತ್ತು ಯುರೋಪಿಯನ್ ದೇಶಗಳಿಗೆ ಬೆದರಿಕೆ ಹಾಕಿದ ಪುಟಿನ್
ಸೇಂಟ್ ಪೀಟರ್ಸ್‌ಬರ್ಗ್ (ರಷ್ಯಾ) – ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸುವೆವು, ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಇವರು ಅಮೇರಿಕಾ ಮತ್ತು ಯುರೋಪಿಯನ್ ದೇಶಗಳಿಗೆ ಬೆದರಿಕೆ ಹಾಕಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಪುತಿನ್ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳ ಹಿರಿಯ ಸಂಪಾದಕರನ್ನು ಭೇಟಿಯಾಗಿದ್ದರು, ಆ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.